ಪಕ್ಕದ ಮನೆಯ ಕಾಂಪೌಂಡ್ ಹತ್ತಬೇಡಿ, ಹೂಕುಂಡ ಬೀಳಿಸಬೇಡಿ…; ದರ್ಶನ್
Team Udayavani, Feb 6, 2018, 12:08 PM IST
ಫೆಬ್ರವರಿ 16 ದರ್ಶನ್ ಅಭಿಮಾನಿಗಳ ಪಾಲಿಗೆ ಹಬ್ಬ. ಅದಕ್ಕೆ ಕಾರಣ ಅಂದು ದರ್ಶನ್ ಹುಟ್ಟುಹಬ್ಬ. ದರ್ಶನ್ ಹುಟ್ಟುಹಬ್ಬ ಎಂದರೆ ಅವರ ಅಭಿಮಾನಿಗಳ ಸಂಭ್ರವನ್ನು ಕೇಳಬೇಕೇ …ದೂರದ ಊರುಗಳಿಂದ ಬರುವ ಅಭಿಮಾನಿಗಳು ಕೇಕ್, ದರ್ಶನ್ ಅವರ ವಿವಿಧ ಭಂಗಿಯ ಫೋಟೋಗಳನ್ನಿಡಿದು ರಾಜರಾಜೇಶ್ವರಿ ನಗರದ ಮನೆಮುಂದೆ ಸಂಭ್ರಮಿಸುತ್ತಿರುತ್ತಾರೆ. ಆ ಸಂಭ್ರಮದಲ್ಲಿ ಅಕ್ಕಪಕ್ಕದ ಮನೆಯ ಕಾಂಪೌಂಡ್ ಹತ್ತೋದು ಕೂಡಾ ನಡೆದು ಹೋಗುತ್ತದೆ. ಈ ಬಾರಿ ದರ್ಶನ್ ತಮ್ಮ ಅಭಿಮಾನಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ಬರ್ತ್‌ಡೇ ಸಂಭ್ರಮದ ವೇಳೆ ಅಕ್ಕಪಕ್ಕದ ಮನೆಯ ಕಾಂಪಾಂಡ್ ಹತ್ತೋದು, ಹೂವಿನಕುಂಡ ಬೀಳಿಸೋದನ್ನು ಮಾಡಬಾರದು ಎಂದು ಮನವಿ ಮಾಡಿದ್ದಾರೆ. ದರ್ಶನ್ ತಮ್ಮ ಅಭಿಮಾನಿಗಳಿಗೆ ಬರೆದ “ವಿನಂತಿ’ ಪತ್ರ ಹೀಗಿದೆ ….
ನಲ್ಮೆಯ ಅಭಿಮಾನಿಗಳಲ್ಲಿ … ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ. ನನ್ನ ಹುಟ್ಟುಹಬ್ಬದ ದಿನ ನೀವೆಲ್ಲ ದೂರದೂರದ ಊರುಗಳಿಂದ ಬಂದು ನನಗೆ ಶುಭಾಶಯ ಕೋರಿ ನಿಮ್ಮದೇ ಹುಟ್ಟುಹಬ್ಬ ಎನ್ನುವಂತೆ ಸಂಭ್ರಮಿಸುವುದು ನನ್ನ ಯಾವುದೋ ಜನ್ಮದ ಪುಣ್ಯ ಫಲವೆಂದೇ ಭಾವಿಸುತ್ತೇನೆ. ಈ ನಿಮ್ಮ ಪ್ರೀತಿಗೆ ನಾನು ಚಿರಋಣಿ. ನಿಮಗೆಲ್ಲ ತುಂಬು ಹೃದಯದ ಧನ್ಯವಾದ. ಆದರೆ, ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ದಯವಿಟ್ಟು ನೀವೆಲ್ಲರೂ ಅಕ್ಕಪಕ್ಕದ ಮನೆಯ ನಿವಾಸಿಗಳಿಗೆ ತೊಂದರೆ ಆಗದಂತೆ ಶಾಂತಿ ಹಾಗೂ ಶಿಸ್ತಿನಿಂದ ವರ್ತಿಸಬೇಕಾಗಿ ನಿಮ್ಮೆಲ್ಲರಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ.
ದಯವಿಟ್ಟು ಯಾರೂ ನನ್ನ ಅಕ್ಕಪಕ್ಕದ ಮನೆಯ ಕಾಂಪೌಂಡ್ ಹತ್ತುವುದು, ಒಳಪ್ರವೇಶಿಸುವುದು, ಹೂಕುಂಡಗಳನ್ನು ಬೀಳಿಸುವುದು, ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ ಅನುಚಿತ ವರ್ತನೆ ತೋರಬಾರದು. ನನ್ನ ಬಗ್ಗೆ ಇಷ್ಟೆಲ್ಲಾ ಪ್ರೀತಿ, ಅಭಿಮಾನ ಇಟ್ಟಿರುವ ನೀವೆಲ್ಲಲ ನನ್ನ ಈ ಕೋರಿಕೆಯನ್ನು ನಡೆಸಿಕೊಡುವಿರಾಗಿ ನಂಬಿರುತ್ತೇನೆ ಹಾಗೂ ಸಂಘದ ಕಾರ್ಯಕರ್ತರಿಗೆ ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕಾಗಿ ವಿನಂತಿ.
ಇಂತಿ, ನಿಮ್ಮ
ಪ್ರೀತಿಯ ದಾಸ
ದರ್ಶನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.