ಇಂದು ದರ್ಶನ್ ಹುಟ್ಟುಹಬ್ಬ: ಹೊಸ ಸಿನಿಮಾಗಳ ಫಸ್ಟ್ ಲುಕ್ ರಿಲೀಸ್
Team Udayavani, Feb 16, 2022, 10:45 AM IST
ಇಂದು ನಟ ದರ್ಶನ್ ಹುಟ್ಟುಹಬ್ಬ. ದರ್ಶನ್ ಹುಟ್ಟುಹಬ್ಬವೆಂದರೆ ಅವರ ಅಭಿಮಾನಿಗಳ ಪಾಲಿಗೆ ದೊಡ್ಡ ಹಬ್ಬ. ದೂರದ ಊರುಗಳಿಂದ ಅಭಿಮಾನಿಗಳು ದರ್ಶನ್ ಮನೆ ಬಳಿ ಆಗಮಿಸಿ, ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ದರ್ಶನ್ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಲ್ಲ. ಅದಕ್ಕೆ ಕಾರಣ ಕೋವಿಡ್. ಈ ಬಾರಿಯೂ ದರ್ಶನ್ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ. ಈ ಕುರಿತು ಇತ್ತೀಚೆಗೆ ವಿಡಿಯೋವೊಂದನ್ನು ದರ್ಶನ್ ಬಿಟ್ಟಿದ್ದಾರೆ.
“ಪ್ರತಿ ವರ್ಷ ನನ್ನ ಹುಟ್ಟುಹಬ್ಬವನ್ನು ನೀವು ಹಬ್ಬದ ತರಹ ಆಚರಿಸ್ತೀರಾ. ಹುಟ್ಟುಹಬ್ಬ ಮಾಡಬೇಕೆಂದು ನನಗೂ ಆಸೆ ಇತ್ತು.ಆದರೆ, ಈ ಬಾರಿಯೂ ಆಚರಿಸುತ್ತಿಲ್ಲ. ಅದಕ್ಕೆ ಮುಖ್ಯ ಕಾರಣ ಪುನೀತ್ ರಾಜ್‌ಕುಮಾರ್ ಅವರ ನಿಧನ. ಅದು ಆದ ಮೇಲೆ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳೋದು ಯಾಕೋ ನನ್ನ ಮನಸ್ಸಿಗೆ ಸರಿ ಕಾಣುತ್ತಿಲ್ಲ. ಹಾಗಾಗಿ, ಬರ್ತ್‌ಡೇ ಆಚರಿಸೋದು ಬೇಡ ಎಂದು ನಿರ್ಧರಿಸಿದ್ದೇನೆ. ಖಂಡಿತಾ, ಮುಂದಿನ ವರ್ಷ ಎಲ್ಲರಿಗೂ ಸಿಗುತ್ತೇನೆ. ಈ ಬಾರಿ ನಾನೂ ಊರಲ್ಲಿ ಇರಲ್ಲ. ಆದರೆ, ಅಭಿಮಾನಿಗಳಿಗೆ ಬೇಸರ ಮಾಡಲು ಇಷ್ಟಪಡಲ್ಲ. ಇದೇ ಫೆ.18ಕ್ಕೆ ನನ್ನ “ಮೆಜೆಸ್ಟಿಕ್’ ಚಿತ್ರ ಬಿಡುಗಡೆಯಾಗುತ್ತಿದೆ. ತಾಂತ್ರಿಕವಾಗಿ ಅಪ್‌ಡೇಟ್ ಆಗಿ ಈ ಚಿತ್ರ ತೆರೆಗೆ ಬರುತ್ತಿದೆ. ಜೊತೆಗೆ “ಕ್ರಾಂತಿ’ ಹಾಗೂ ನನ್ನ ಹಾಗೂ ತರುಣ್ ಕಾಂಬಿನೇಶನ್ ಹೊಸ ಸಿನಿಮಾದ ಅಪ್‌ಡೇಟ್ ಕೂಡಾ ಬರಲಿದೆ’ ಎಂದಿದ್ದಾರೆ ದರ್ಶನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.