Divorce; ಚಂದನ್ ಶೆಟ್ಟಿ- ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು!
Team Udayavani, Jun 7, 2024, 5:27 PM IST
ಬೆಂಗಳೂರು: ಕನ್ನಡದ ಪ್ರಸಿದ್ದ ರಾಪರ್, ನಟ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಪರಿಚಯವಾಗಿ ಬಳಿಕ ವಿವಾಹವಾಗಿದ್ದ ಈ ಜೋಡಿ ಇದೀಗ ದೂರವಾಗಿದೆ ಎನ್ನಲಾಗಿದೆ.
ಬೆಂಗಳೂರಿನ 2ನೇ ಹೆಚ್ಚುವರಿ ಕೌಟುಂಬಿಕ ಕೋರ್ಟ್ ಇಂದು (ಜೂನ್ 7) ಚಂದನ್ ಶೆಟ್ಟಿ ಮತ್ತು ನಿವೇದಿತಾಗೆ ವಿಚ್ಚೇದನ ಮಂಜೂರು ಮಾಡಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಈವರೆಗೂ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಸಾರ್ವಜನಿಕವಾಗಿ ಮನಸ್ತಾಪ ಹೊರಹಾಕಿರಲಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ವಿಚ್ಚೇದನ ವಿಚಾರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಆದರೆ ಇದುವರೆಗೆ ಇಬ್ಬರೂ ಅಧಿಕೃತ ಹೇಳಿಕೆ ನೀಡಿಲ್ಲ.
ಕನ್ನಡದ ಬಿಗ್ ಬಾಸ್ ಸೀಸನ್ 5ರಲ್ಲಿ ಮೊದಲ ಬಾರಿಗೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಭೇಟಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಸ್ನೇಹ, ಪ್ರೀತಿಯಾಗಿ ಬಳಿಕ ಮೈಸೂರು ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ಅವರು ನಿವೇದಿತಾಗೆ ಪ್ರಪೋಸ್ ಮಾಡಿದ್ದರು.
2020ರ ಫೆಬ್ರವರಿ 26ರಂದು ಚಂದನ್ ಶೆಟ್ಟಿ – ನಿವೇದಿತಾ ವಿವಾಹವಾಗಿದ್ದರು. ಇದೀಗ ನಾಲ್ಕು ವರ್ಷದ ಸಾಂಸಾರಿಕ ಜೀವನಕ್ಕೆ ಇತಿಶ್ರೀ ಹಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.