![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 29, 2023, 4:18 PM IST
ಗಾಯನ, ಸಂಗೀತ ನಿರ್ದೇಶನದಲ್ಲಿ ತೊಡಗಿದ್ದ ಚಂದನ್ ಶೆಟ್ಟಿ ಈಗ ಹೀರೋ ಆಗಿ ಬಿಝಿಯಾಗುತ್ತಿದ್ದಾರೆ. ಈಗಾಗಲೇ ಚಂದನ್ ಎರಡ್ಮೂರು ಸಿನಿಮಾಗಳಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಅದರಲ್ಲಿ “ಸೂತ್ರಧಾರಿ’ ಚಿತ್ರ ಕೂಡಾ ಒಂದು.
ನವರಸನ್ ನಿರ್ಮಾಣದ ಈ ಚಿತ್ರ ಚಿತ್ರೀಕರಣ ಪೂರೈಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಈಗಾಗಲೇ ಈ ಚಿತ್ರದ “ಡ್ಯಾಶ್’ ಸಾಂಗ್ ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದೆ. ಈಗ ಚಿತ್ರದ ಮತ್ತೂಂದು ಹಾಡು ಬಿಡುಗಡೆಯಾಗಿದೆ. ಅದು “ಟ್ರೆಂಡಿಂಗ್‌ನಲ್ಲಿರಬೇಕಾದರೆ ಏನ್ ಮಾಡ್ಬೇಕು’ ಎಂಬ ಹಾಡು.
ಇತ್ತೀಚೆಗೆ ಈ ಹಾಡು ಬಿಡುಗಡೆಯಾಗಿದ್ದು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ವಿಜಯ್ ಈಶ್ವರ್ ಸಾಹಿತ್ಯ ಈ ಚಿತ್ರಕ್ಕಿದೆ. ಮೋಹನ್ ಅವರು ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ.
“ಕಳೆದ ಡಿಸೆಂಬರ್‌ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ ಡ್ಯಾಶ್ ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ’ ಎಂದು ವಿವರ ನೀಡಿದರು ನಿರ್ಮಾಪಕ ನವರಸನ್ ತಿಳಿಸಿದರು.
ನಾಯಕ ಚಂದನ್ ಶೆಟ್ಟಿ ಅವರಿಗೆ ಈ ಹಾಡು ಕೂಡಾ ದೊಡ್ಡ ಹಿಟ್ ಆಗುವ ವಿಶ್ವಾಸವಿದೆ. “ಸೂತ್ರಧಾರಿ ಸಿನಿಮಾದ ಡ್ಯಾಶ್ ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೂಂದು ಹಾಡು ಕೊಡುವ ಜವಾಬ್ದಾರಿ ನನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ “ಏನ್ ಮಾಡ್ಬೇಕು…’ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ’ ಎನ್ನುವುದು ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಮಾತು. ಕಿರಣ್ ಕುಮಾರ್ ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ಅಪೂರ್ವ ನಾಯಕಿಯಾಗಿ ನಟಿಸಿದ್ದಾರೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.