ಚಾರ್ಲಿ ಪೋಸ್ಟರ್ ಬಂತು
Team Udayavani, May 29, 2018, 12:02 PM IST
ರಕ್ಷಿತ್ ಶೆಟ್ಟಿ ನಾಯಕರಾಗಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಯವರ ಗೆಟಪ್ ಕೂಡಾ ವಿಭಿನ್ನ ಶೈಲಿಯಲ್ಲಿರಲಿದೆ. ಈ ನಡುವೆಯೇ ರಕ್ಷಿತ್ ಶೆಟ್ಟಿ ನಟನೆಯ ಮತ್ತೂಂದು ಸಿನಿಮಾದ ಸಿದ್ಧತೆ ಕೂಡಾ ನಡೆದಿದೆ. ಅದು “777 ಚಾರ್ಲಿ’. ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ತಮ್ಮ ಪರಂವಾ ಸ್ಟುಡಿಯೋದಡಿ ನಿರ್ಮಿಸುತ್ತಿದ್ದಾರೆ.
ಈ ಹಿಂದೆ “ಕಿರಿಕ್ ಪಾರ್ಟಿ’ ಚಿತ್ರದ ನಿರ್ಮಾಣದಲ್ಲಿ ರಕ್ಷಿತ್ ಜೊತೆ ಕೈ ಜೋಡಿಸಿದ್ದ ಜಿ.ಎಸ್.ಗುಪ್ತಾ ಕೂಡಾ “ಚಾರ್ಲಿ’ ನಿರ್ಮಾಣದಲ್ಲಿದ್ದಾರೆ. ಉಳಿದಂತೆ ಪುಷ್ಕರ್ ಫಿಲಂಸ್ “ಚಾರ್ಲಿ’ಗೆ ಬೆಂಬಲವಾಗಿದೆ. ಈಗಾಗಲೇ ಚಿತ್ರದ ಮೊದಲ ಟೈಟಲ್ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಎಲ್ಲಾ ಕಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರವನ್ನು ಕಿರಣ್ ರಾಜ್ ನಿರ್ದೇಶನ ಮಾಡುತ್ತಿದ್ದಾರೆ.
ಇವರಿಗಿದು ಚೊಚ್ಚಲ ಸಿನಿಮಾ. ಅಂದಹಾಗೆ, “777 ಚಾರ್ಲಿಯ ಮನುಷ್ಯ ಹಾಗೂ ಪ್ರಾಣಿಯ ಬಾಂಧವ್ಯದ ಸುತ್ತ ನಡೆಯುವ ಸಿನಿಮಾ. ಯಾವುದೋ ಒಂದು ಕಾರಣಕ್ಕೆ ಬೇಸರಗೊಂಡು ಆಗಿ ಏಕಾಂಗಿಯಾಗಿರುವ ನಾಯಕನಿಗೆ ನಾಯಿಯೊಂದು ಸಿಗುತ್ತದೆ. ಆ ನಾಯಿ ಆತನ ಲೈಫ್ಗೆ ಎಂಟ್ರಿಕೊಟ್ಟ ತಕ್ಷಣ ಆತ ಸಂಪೂರ್ಣ ಬದಲಾಗುತ್ತಾನೆ.ಆ ಬದಲಾವಣೆಗೆ ಕಾರಣ ಏನು,
ಆ ಪ್ರಕ್ರಿಯೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದು ಚಿತ್ರದ ಕಥೆ. ಚಿತ್ರದಲ್ಲಿ ಲಾಬ್ರಾಡಾರ್ ನಾಯಿಯೊಂದು ಪ್ರಮುಖವಾಗಿದ್ದು, ಈಗಾಗಲೇ ಅದಕ್ಕೆ ಬೇಕಾದ ತರಬೇತಿ ನೀಡಲಾಗಿದೆ. ರಕ್ಷಿತ್ ಶೆಟ್ಟಿ ಕೂಡಾ “ಚಾರ್ಲಿ’ ಬಗ್ಗೆ ಎಕ್ಸೆ„ಟ್ ಆಗಿದ್ದು, ಚಿತ್ರೀಕರಣಕ್ಕಾಗಿ ಎದುರು ನೋಡುತ್ತಿದ್ದಾರೆ. ಜೂನ್‌ನಿಂದ ಚಿತ್ರೀಕರಣ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.