Chef Chidambara; ಶೂಟಿಂಗ್ ಮುಗಿಸಿದ ಅನಿರುದ್ಧ್ ಚಿತ್ರ

Team Udayavani, Oct 13, 2023, 3:39 PM IST

Chef Chidambara; Anirudh’s film has finished shooting

‘ಶೆಫ್ ಚಿದಂಬರ’- ಹೀಗೊಂದು ಸಿನಿಮಾ ಆರಂಭವಾಗಿರೋದು ನಿಮಗೆ ಗೊತ್ತಿರಬಹುದು. ಈಗ ಈ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಪೂರ್ಣಗೊಳಿಸಿದೆ. ಅನಿರುದ್ಧ್ ನಾಯಕರಾಗಿರುವ ಈ ಚಿತ್ರವನ್ನು ಎಂ.ಆನಂದರಾಜ್‌ ನಿರ್ದೇಶಿಸಿದ್ದಾರೆ.

ಚಿತ್ರೀಕರಣ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮಾಧ್ಯಮ ಮುಂದೆ ಬಂದ ತಂಡ, ಚಿತ್ರದ ಕುರಿತಾಗಿ ಮಾತನಾಡಿದೆ. “ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್‌ 10ರಂದು ಆರಂಭವಾಗಿತ್ತು. ಅಕ್ಟೋಬರ್‌ 10ರಂದು ಮುಕ್ತಾಯವಾಗಿದೆ. ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನ ದುರ್ಗ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಇದೊಂದು ಆ್ಯಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಡಾರ್ಕ್‌ ಹ್ಯೂಮರ್‌ ಜಾನರ್‌ನ ಚಿತ್ರ. ಅನಿರುದ್ಧ್ ಅವರು ಶೆಫ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಚೆಲ್‌ ಡೇವಿಡ್‌ ಅವರ ಪಾತ್ರ ಕೂಡ ವಿಭಿನ್ನವಾಗಿದೆ. ಶರತ್‌ ಲೋಹಿತಾಶ್ವ, ಶಿವಮಣಿ, ಮಹಾಂತೇಶ್‌ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ’ ಎಂದು ಮಾಹಿತಿ ನೀಡಿದರು. ದಮ್ತಿ ಪಿಕ್ಚರ್ಸ್‌ ಲಾಂಛನದಲ್ಲಿ ರೂಪ ಡಿ.ಎನ್‌ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ನಾಯಕ ಅನಿರುದ್ಧ್ ಮಾತನಾಡಿ “ನಾನು ಯಾವತ್ತಿಗೂ ಅಡುಗೆಮನೆ ಕಡೆ ಹೋದವನಲ್ಲ. ಈ ಚಿತ್ರದಲ್ಲಿ ಮೊದಲ ಬಾರಿಗೆ ಶೆಫ್ ಪಾತ್ರ ನಿರ್ವಹಿಸಿದ್ದೇನೆ. ತರಬೇತಿ ಪಡೆದು ಈ ಪಾತ್ರ ನಿರ್ವಹಣೆ ಮಾಡಿದ್ದೇನೆ. ಕ್ರೈಮ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಚಿತ್ರವಾದರೂ, ನಿರ್ದೇಶಕರು ಕಥೆಯನ್ನು ಹಾಸ್ಯದ ಮೂಲಕ ಹೇಳಿದ್ದಾರೆ’ ಎಂದರು.

ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಪಾತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎನ್ನುವುದು ನಿಧಿ ಸುಬ್ಬಯ್ಯ ಮಾತು. ಚಿತ್ರದಲ್ಲಿ ಮಲಯಾಳಿ ಬೆಡಗಿ ರಚೆಲ್‌ ಡೇವಿಡ್‌ ಕೂಡಾ ನಾಯಕಿಯಾಗಿ ನಟಿಸಿದ್ದಾರೆ. “ಅನು ಎಂಬುದು ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಕಥೆ ಎರಡೂ ಚೆನ್ನಾಗಿದೆ’ ಎಂದರು ರೆಚೆಲ್‌ ಡೇವಿಡ್‌.

ಚಿತ್ರಕ್ಕೆ ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್‌ ಪರಶುರಾಮ್‌ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್‌ ಚಂದ್ರ ಸಂಕಲನ, ರಿತ್ವಿಕ್‌ ಮುರಳೀಧರ್‌ ಸಂಗೀತ ನಿರ್ದೇಶನ, ಆಶಿಕ್‌ ಹುಸಗುಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.