Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Team Udayavani, Nov 17, 2024, 10:59 AM IST
ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ಮಾಸ್ಟರ್ ರೋಹಿತ್ (Master Rohit) ರಸ್ತೆ ಅಪಘಾತವೊಂದರಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ.
ಶನಿವಾರ ಸಂಜೆ (ನ.16 ರಂದು) ಕಾರು – ಬಸ್ಸು ನಡುವಿನ ಅಪಘಾತ ರೋಹಿತ್ ಅವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಶ್ರೀರಂಗಪಟ್ಟಣದ ಪಾಲಹಳ್ಳಿ ರೋಹಿತ್ ಅವರು ಖಾಸಗಿ ಕಾರ್ಯಕ್ರಮವನ್ನು ಮುಗಿಸಿ ಮನೆಗೆ ವಾಪಾಸ್ ಆಗುವ ವೇಳೆ ಬಸ್ಸು ಅವರ ಕಾರಿಗೆ ಮುಖಾಮುಖಿಯಾಗಿ ಢಿಕ್ಕಿ ಆಗಿದೆ. ಪರಿಣಾಮ ನಟ ರೋಹಿತ್ ದಂತದ ವಸಡು ಕಟ್ ಆಗಿ, ತಲೆ ಬುರುಡೆಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಕಾರಿನಲ್ಲಿ ರೋಹಿತ್ ಅವರ ತಾಯಿ ಕೂಡ ಜತೆಯಿದ್ದರು ಎನ್ನಲಾಗಿದೆ. ಅವರ ಕಾಲು, ಕೈಗಳಿಗೆ ಗಾಯವಾಗಿದೆ. ಕಾರಿನಲ್ಲಿದ್ದ ರೋಹಿತ್ ಗೆಳೆಯ ಹಾಗು ಉಪನ್ಯಾಸಕ ಸೇರಿ ನಾಲ್ವರಿಗೆ ಗಾಯವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ʼಕಾಟೇರʼ ಸಿನಿಮಾದಲ್ಲಿ ಇತ್ತೀಚೆಗೆ ರೋಹಿತ್ ನಟಿಸಿದ್ದರು. ಇದಲ್ಲದೆ ಅವರು ನಟಿಸಿದ್ದ ʼಒಂದಲ್ಲ ಎರಡಲ್ಲʼದಲ್ಲಿ ನಟಿಸಿದ್ದರು. ಅವರ ಅಭಿನಯಕ್ಕೆ ರಾಷ್ಟ್ರಪ್ರಶಸ್ತಿ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.