Chilli Chicken Movie: ಟ್ರೇಲರ್‌ನಲ್ಲಿ ಚಿಲ್ಲಿ ಚಿಕನ್
Team Udayavani, Jun 11, 2024, 3:20 PM IST
ಹೋಟೆಲ್ ಕೆಲಸಮಾಡುವ ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಶ್ ಅವರು ನಿರ್ದೇಶಿಸಿರುವ ಚಿತ್ರ ಚಿಲ್ಲಿ ಚಿಕನ್ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ ಚೈನೀಸ್ ರೆಸ್ಟೋರೆಂಟ್ ಒಂದನ್ನು ಪ್ರಾರಂಭಿಸಬೇಕೆಂಬ ಕನಸು ಕಾಣುವ ಈ ಹುಡುಗರ ಕನಸಿಗೆ ಏನೆಲ್ಲಾ ಅಡೆ ತಡೆಗಳು ಬರುತ್ತವೆ ಎಂಬ ಒನ್ ಲೈನ್ ಕಥೆ ಇಟ್ಟುಕೊಂಡು “ಚಿಲ್ಲಿ ಚಿಕನ್’ ಸಿನಿಮಾ ಮಾಡಲಾಗಿದೆ. ಇದು ಬೆಂಗಳೂರಿನಲ್ಲಿ ನಡೆದ ನೈಜ ಘಟಕ ಆಧಾರಿತ ಸಿನಿಮಾ ಎಂಬುದು ವಿಶೇಷ. ರೆಸ್ಟೋರೆಂಟ್‌ವೊಂದರಲ್ಲಿ ಕುಳಿತಾಗ ಸಂಗೀತ ನಿರ್ದೇಶಕ ಸಿದ್ಧಾಂತ ಸುಂದರ್ ಅವರಿಗೆ ಈ ಕಾನ್ಸೆಪ್ಟ್ ಹೊಳೆಯಿತಂತೆ. ಅದನ್ನು ನಿರ್ದೇಶಕ ಪ್ರತೀಕ್ ಪ್ರಜೋಶ್ ಅವರಿಗೆ ಹೇಳುತ್ತಾರೆ.
ಅವರು ಆ ಒಂದು ಲೈನ್ ಕಥೆಯ ಮೇಲೆ ಸಾಕಷ್ಟು ವರ್ಕ್ ಮಾಡಿ ಈಗ ಸಿನಿಮಾ ಮಾಡಿ ಬಿಡುಗಡೆಗೆ ಸಿದ್ಧಗೊಳಿಸಿದ್ದಾರೆ. ನಿರ್ದೇಶಕ ಪ್ರತೀಕ್ ಪ್ರಜೋಶ್ ಮಾತನಾಡಿ, “ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ರಿಲೀಸ್ ಆಗಲಿದೆ’ ಎಂದರು.
ಈ ಚಿತ್ರದ ನಾಯಕನಾಗಿ ಬಿ.ವಿ. ಶೃಂಗಾ ಅಭಿನಯಿಸಿದ್ದಾರೆ.
“ನಾವೆಲ್ಲಾ ಇಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ನಾನಿಲ್ಲಿ ರೆಸ್ಟೋರೆಂಟ್ ಮಾಲೀಕನ ಪಾತ್ರ ಮಾಡಿದ್ದೇನೆ. ಕಥೆ ಕೇಳಿದಾಗ ಇಂದಿನ ಜನರೇಶನ್‌ಗೆ ಹೇಳಬೇಕಾದ ವಿಷಯವಿದೆ ಅನಿಸಿತು. ಇದರಲ್ಲಿ ಹ್ಯೂಮರ್, ಫ್ಯಾಮಿಲಿ ಡ್ರಾಮಾವನ್ನು ನಿರ್ದೇಶಕರು ಚೆನ್ನಾಗಿ ಬಳಸಿದ್ದಾರೆ. ನಂದಿಲ್ಲಿ ಮಿಡ್ಲ್ ಕ್ಲಾಸ್ ಕುಟುಂಬದಿಂದ ಬಂದು, ಚೈನೀಸ್ ರೆಸ್ಟೋರೆಂಟ್ ಮಾಡುವ ಆಸೆಯಿಂದ ಹೇಗೆಲ್ಲಾ ಅಲೆದಾಡುತ್ತಾನೆ ಎಂಬುದನ್ನು ನೋಡಬಹುದು’ ಎಂದರು.
ನಟಿ ನಿತ್ಯಶ್ರೀ, ನಾಯಕಿ ರಿನಿ, ಮಣಿಪುರ ನಟ ಬಿಜು ತಾಂಜಿಂ, ಆಸಾಂ ಕಲಾವಿದ ಹಿರಾಕ್ ಸೋನಾವಾಲ್, ಉತ್ತರಕಾಂಡದ ನಟ ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ತಮ್ಮ ಅನುಭವ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.