ಚಿರು-ಮೇಘನಾ ರಾಜ್ ನಿಶ್ಚಿತಾರ್ಥ?
Team Udayavani, Oct 10, 2017, 10:24 AM IST
ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರ ನಿಶ್ಚಿತಾರ್ಥ ಅಕ್ಟೋಬರ್ 22ರಂದು ನಡೆಯಲಿದ್ದು, ಡಿಸೆಂಬರ್ನಲ್ಲಿ ಮದುವೆಯಾಗಲಿದ್ದಾರೆಂಬ ಸುದ್ದಿಯೊಂದು ಓಡಾಡುತ್ತಿದೆ. ಆದರೆ, ಈ ಬಗ್ಗೆ ಇಬ್ಬರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಚಿರು ಹಾಗೂ ಮೇಘನಾ ರಾಜ್ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆಂಬ ಸುದ್ದಿ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಕೇಳಿಬರುತ್ತಲೇ ಇತ್ತು.
ಈ ಬಗ್ಗೆ ಪ್ರಶ್ನೆ ಬಂದಾಗಲೆಲ್ಲಾ ಇಬ್ಬರು ಆ ಪ್ರಶ್ನೆಯಿಂದ ಜಾರಿಕೊಳ್ಳುತ್ತಿದ್ದರು. ಈಗ ಇವರಿಬ್ಬರ ನಿಶ್ಚಿತಾರ್ಥದ ಸುದ್ದಿ ಓಡಾಡುತ್ತಿದೆ. ಎರಡೂ ಕುಟುಂಬ ಹಾಗೂ ಆಪ್ತ ವರ್ಗದ ಸಮ್ಮುಖದಲ್ಲಿ ಚಿರು ಹಾಗೂ ಮೇಘನಾ ರಾಜ್ ಅವರ ನಿಶ್ಚಿತಾರ್ಥ ನಡೆಯಲಿದೆಯಂತೆ. ಇನ್ನು, ಇವರಿಬ್ಬರ ವಿವಾಹ ಡಿಸೆಂಬರ್ 6 ರಂದು ನಡೆಯಲಿದೆ ಎಂಬ ಸುದ್ದಿಯೂ ಕೇಳಿಬರುತ್ತಿದೆ.
ಕನ್ನಡದ ಚಿತ್ರರಂಗದ ಹಿರಿಯ ಕಲಾವಿದರಾದ ಸುಂದರ್ ರಾಜ್ ಹಾಗೂ ಪ್ರಮೀಳಾ ಜೋಷಾಯ್ ಅವರ ಪುತ್ರಿಯಾಗಿರುವ ಮೇಘನಾ ರಾಜ್, ಕನ್ನಡ, ಮಲಯಾಳಂ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಚಿರಂಜೀವಿ ಕೂಡಾ “ವಾಯುಪುತ್ರ’ ಚಿತ್ರ ಮೂಲಕ ಎಂಟ್ರಿಕೊಟ್ಟು, ಇಲ್ಲಿವರೆಗೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಚಿರು ಹಾಗೂ ಮೇಘನಾ “ಆಟಗಾರ’ ಎಂಬ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.