Sharan; ಮೇ 10ಕ್ಕೆ ‘ಛೂ ಮಂತರ್’ ತೆರೆಗೆ ಸಿದ್ಧ
Team Udayavani, Apr 16, 2024, 3:24 PM IST
ಶರಣ್ ನಟನೆಯ “ಛೂ ಮಂತರ್’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೇ 10ಕ್ಕೆ ಚಿತ್ರ ತೆರೆಗೆ ಬರಲಿದೆ. ಶರಣ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಂಡಿದ್ದಾರೆ.
“ಕರ್ವ’ ನವನೀತ್ ನಿರ್ದೇಶನ ಈ ಚಿತ್ರಕ್ಕಿದ್ದು, ಈಗಾಗಲೇ ಚಿತ್ರದ ಚಿತ್ರದ ಫಸ್ಟ್‌ಲುಕ್, ಮೋಶನ್ ಪೋಸ್ಟರ್ ಹಾಗೂ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದೆ. “ಛೂ ಮಂತರ್’ ಮೇಲೆ ನಿರ್ದೇಶಕ ನವನೀತ್ ಕೂಡಾ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ನವನೀತ್, “”ಛೂ ಮಂತರ್ ಇದೊಂದು ಫ್ಯಾನ್ಸಿ ಲೋಕ. ಹೈಪರ್ ಲಿಂಕ್ ಇರುವ ಮೂರು ಭಿನ್ನ ಕಥೆಗಳು ಜೊತೆಗೆ ಸಾಗುವ ಚಿತ್ರ ಇದಾಗಿದ್ದು, ನಾಯಕ ಎಲ್ಲಾ ಕಥೆಯಲ್ಲಿ ಇರುತ್ತಾನೆ. ಶರಣ್ ಅವರು ಇಲ್ಲಿವರೆಗೆ ಪೂರ್ಣ ಪ್ರಮಾಣದ ಹಾರರ್ ಸಿನಿಮಾಗಳನ್ನು ಮಾಡಿಲ್ಲ. ಇದು ಅವರ ಕೆರಿಯರ್‌ನ ಮೊದಲ ಔಟ್ ಅಂಡ್ ಔಟ್ ಹಾರರ್ ಸಿನಿಮಾ. ನಾವು ಉತ್ತರಾಖಂಡ್‌ಗೆ ತೆರಳಿ ಹಿಮದಲ್ಲಿ ಶೂಟಿಂಗ್ ಮಾಡಿದ್ದೇವೆ’ ಎಂಬುದು ನಿರ್ದೇಶಕ ನವನೀತ್ ಮಾತು.
ಚಿತ್ರದ ನಿರ್ಮಾಪಕ ತರುಣ್ ಶಿವಪ್ಪ ಮಾತನಾಡಿ, “ಶರಣ್ ಅವರ ಜೊತೆ “ವಿಕ್ಟರಿ-2′ ಚಿತ್ರ ಮಾಡಿ ವಿಕ್ಟರಿ ಪಡೆದಿದ್ದೆ. ನಂತರ ಅವರ ಜೊತೆ ಕೆಲಸ ಮಾಡಬೇಕು ಅಂತ ಕಳೆದ ಮೂರು ವರ್ಷಗಳಿಂದ, ಹೊಸ ನಿರ್ದೇಶಕರಿಂದ ಹಿಡಿದು ಅನುಭವಿ ನಿರ್ದೇಶಕರವರೆಗೂ ಕಥೆ ಕೇಳಿಸಿದ್ದೆ. ಆದರೆ ಶರಣ್ ಚಿತ್ರಗಳ ಆಯ್ಕೆ ವಿಷಯದಲ್ಲಿ ತುಂಬಾ ಚೂಸಿಯಾಗಿದ್ದರು. ಒಳ್ಳೆ ಕಥೆ, ಪಾತ್ರ, ಭಿನ್ನತೆಯನ್ನು ಕಾಯ್ದು ಕೊಳ್ಳತ್ತಿದ್ದರು. ಇವರಿಗೆ ಕಥೆ ಹೇಳಿಸಿ ಸುಸ್ತಾಗಿದ್ದೆ. ತರುಣ್ ಸುಧೀರ್ ಅವರು ಸಿಕ್ಕಾಗ ಚಿತ್ರ ಮಾಡುವ ಬಗ್ಗೆ ಕೇಳಿದ್ದೆ. ಆಗ ಅವರು ಶರಣ್ ಕೆರಿಯರ್‌ನಲ್ಲಿ ಸಂಪೂರ್ಣ ಹಾರರ್ ಚಿತ್ರ ಮಾಡಿಲ್ಲ. ಆ ಥರದ ಕಥೆ ಇದ್ದರೆ ಪ್ರಯತ್ನ ಮಾಡಿ ಅಂದರು. ನಂತರ ಬಂದಿದ್ದೇ “ಛೂ ಮಂತರ್’ ಎನ್ನುತ್ತಾರೆ.
ಚಿತ್ರದ ನಾಯಕಿ ಅದಿತಿ ಪ್ರಭುದೇವ, ಹಾಗೂ ಪ್ರಭು, ಮೇಘನಾ ಗಾಂವ್ಕರ್, ರಜಿನಿ, ಧರ್ಮ ಮುಂತಾದವರು ನಟಿಸಿದ್ದಾರೆ. ಹಾಗೆಯೇ ಚಿಕ್ಕಣ್ಣ, ಶಂಕರ್ ಅಶ್ವಥ್, ಕಿರಣ್, ವಿಜಯ್ ಚೆಂಡೂರು, ಓಂ ಪ್ರಕಾಶ್ ರಾವ್ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರಕ್ಕೆ ಅವಿನಾಶ್ ಹಿನ್ನಲೆ ಸಂಗೀತ, ಚಂದನ್ ಶೆಟ್ಟಿ ಸಂಗೀತ, ಅನೂಪ್ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.