ಐಪೋನ್‌ನಲ್ಲಿ ಸಿನಿಮಾ ಮೇಕಿಂಗ್
ಜನವರಿಯಲ್ಲಿ ಬಿಡುಗಡೆಗೆ ಸಜ್ಜಾದ ಡಿಂಗ್ ಡಾಂಗ್ ಡಿಂಗ
Team Udayavani, Dec 25, 2019, 7:00 AM IST
ಮೊಬೈಲ್ ಫೋನ್‌ನಲ್ಲಿ ಸಿನಿಮಾ ಚಿತ್ರೀಕರಿಸುವ ಬಗ್ಗೆ ನೀವೆಲ್ಲ ಕೇಳಿರಬಹುದು. ಈಗ ಕನ್ನಡದಲ್ಲಿ ಅಂಥದ್ದೇ ಒಂದು ಚಿತ್ರ ತೆರೆಗೆ ಬರುತ್ತಿದೆ. ಅಂದಹಾಗೆ, ಆ ಚಿತ್ರದ ಹೆಸರು “ಡಿಂಗ’. ಆ್ಯಪಲ್ ಐಪೋನ್‌ನಲ್ಲಿಯೆ ಇಡೀ ಚಿತ್ರವನ್ನು ಚಿತ್ರೀಕರಿಸಿರುವುದು ಈ ಚಿತ್ರದ ವಿಶೇಷ. “ಐ-ಫೋನ್‌ಗೆ ಹೊಂದುವಂತಹ ವಿಶೇಷ ಲೆನ್ಸ್‌ಗಳನ್ನು ಯು.ಎಸ್ ನಿಂದ ತರಿಸಿ ಚಿತ್ರೀಕರಣ ಮಾಡಲಾಗಿದೆ. ಇದು ಇಡೀ ಏಷ್ಯಾದಲ್ಲೇ ಪ್ರಥಮ ಪ್ರಯತ್ನ. ಒಂದು ಕಮರ್ಷಿಯಲ್ ಚಿತ್ರ ಯಾವ ರೀತಿ ಬರುತ್ತದೊ, ಅದೇ ರೀತಿ ಈ ಚಿತ್ರ ಕೂಡ ಮೂಡಿಬಂದಿದೆ’ ಎನ್ನುತ್ತದೆ ಚಿತ್ರತಂಡ.
“ಶ್ರೀಮಾಯಕಾರ ಪ್ರೊಡಕ್ಷನ್ಸ್’ ಲಾಂಛನದಲ್ಲಿ ಡಾ. ಮುಗೂರು ಮಧು ದೀಕ್ಷಿತ್ ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಜೈನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಸುದ್ದೊ ರಾಯ್ ಸಂಗೀತ ಸಂಯೋಜನೆಯಿದ್ದು, ಮಂಜುನಾಥ್ ಛಾಯಾಗ್ರಹಣ ಹಾಗೂ ಶ್ರೀಕಾಂತ ಸಂಕಲನ ಕಾರ್ಯವಿದೆ. ಚಿತ್ರಕ್ಕೆ ವಿಜಯ್ ಈಶ್ವರ್ ಸಂಭಾಷಣೆ ಬರೆದಿದ್ದಾರೆ. ಆರವ್ ಗೌಡ, ಅಭಿಷೇಕ್ ಜೈನ್, ಅನೂಷಾ, ನಾಗೇಂದ್ರ ಶಾ, ರಘು ರಮಣಕೊಪ್ಪ ಮುಂತಾದವರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸದ್ಯ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿ, ಫಸ್ಟ್‌ಕಾಪಿಯೊಂದಿಗೆ ಹೊರಬಂದಿರುವ “ಡಿಂಗ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ, ಚಿತ್ರಕ್ಕೆ “ಯು/ಎ’ ಪ್ರಮಾಣಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ ನಿಧಾನವಾಗಿ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಿದೆ. ಜನವರಿ ಮೊದಲವಾರ ಈ ಚಿತ್ರದ ಆಡಿಯೋ ಬಿಡುಗಡೆಯಾಗಲಿದ್ದು, ಫೆಬ್ರವರಿ ಮೊದಲ ವಾರ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.