ದಸರೆಗೆ ಹೊಸಬರ ಕಾಕ್ಟೈಲ್ ಟ್ರೇಲರ್
Team Udayavani, Sep 7, 2021, 3:43 PM IST
ಕಾಕ್ಟೈಲ್- ಹೀಗೊಂದು ಹೆಸರಿನ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಸಸ್ಪೆನ್ಸ್-ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ವಿ.ಮೈನಸ್ ಮತ್ತು ಸುವ್ವಾಲಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಶ್ರೀರಾಮ್ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಪ್ರಸ್ತುತ ಕೊರೊನಾ ಸಂದರ್ಭದಲ್ಲಿ ಚಿತ್ರರಂಗ ಅನುಭವಿಸಿದ ತಾಕಲಾಟಗಳನ್ನು ಅವಲೋಕಿಸಿ ಚಿತ್ರಕತೆಯನ್ನು ರಚಿಸಲಾಗಿದೆಯಂತೆ.
ಅನುಪಮ್ಕೇರ್ ನಟನಾ ಶಾಲೆ ಯಲ್ಲಿ ತರಬೇತಿ ಪಡೆದುಕೊಂಡಿರುವ ವೀರೇಶ್ಕೇಶವ್ ಚಿತ್ರದ ನಾಯಕ. ಈಗಾಗಲೇ ನರಗುಂದ ಬಂಡಾಯ ಮತ್ತು ಯುವರತ್ನ ಚಿತ್ರಗಳಲ್ಲಿ ಸಣ್ಣ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಈಗ “ಕಾಕ್ಟೆ„ಲ್’ ಸಿನಿಮಾ ಮೂಲಕ ನಾಯಕರಾಗಿ ಪರಿಚಯಗೊಳ್ಳುತ್ತಿದ್ದಾರೆ.
ಇದನ್ನೂ ಓದಿ:ಪುರುಷೋತ್ತಮನ ಫ್ಯಾಮಿಲಿ ಸಾಂಗ್: ಅದ್ಧೂರಿ ಆಡಿಯೋ ರಿಲೀಸ್
ನಾಯಕಿಯಾಗಿ ಚರಿಷ್ಮಾ ನಟಿಸುತ್ತಿದ್ದಾರೆ. ಉಳಿದಂತೆ ಶೋಭರಾಜ್, ರಮೇಶ್ ಪಂಡಿತ್, ಶಿವಮಣಿ, ಕರಿಸುಬ್ಬು, ಚಂದ್ರಕಲಾ ಮೋಹನ್, ಮಹಾಂತೇಶ್ ಹಿರೇಮಠ್ ಸೇರಿದಂತೆ ಬಹುದೊಡ್ಡ ಕಲಾವಿದರ ದಂಡೇ ಇರಲಿದೆ.
ಚಿತ್ರಕ್ಕೆ ಲೋಕಿತ ವಸ್ಯ ಸಂಗೀತ, ರವಿವರ್ಮ ಛಾಯಾಗ್ರಹಣ, ಮೋಹನ್ ಸಂಕಲನವಿದೆ. ವಿಜಯಲಕ್ಷೀಕಂಬೈನ್ಸ್ ನಡಿ ಡಾ.ಶಿವಪ್ಪ ನಿರ್ಮಾಣ ಮಾಡುತ್ತಿದ್ದಾರೆ. ದಸರಾ ಹಬ್ಬಕ್ಕೆ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.