ಚಿತ್ರೀಕರಣ ಮುಗಿಸಿದ ‘ಕಾಕ್ಟೈಲ್’
Team Udayavani, Dec 26, 2021, 3:24 PM IST
ಕಾಕ್ಟೈಲ್- ಹೀಗೊಂದು ಹೆಸರಿನ ಸಿನಿಮಾ ಇತ್ತೀಚೆಗೆ ಸೆಟ್ಟೇರಿದ್ದು ನಿಮಗೆ ನೆನಪಿರಬಹುದು. ಈಗ ಚಿತ್ರೀಕರಣ ಪೂರ್ಣಗೊಳಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.
ಸಸ್ಪೆನ್ಸ್-ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ವಿ.ಮೈನಸ್ ಮತ್ತು ಸುವ್ವಾಲಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಶ್ರೀರಾಮ್ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.ಪ್ರಸ್ತುತ ಕೊರೊನಾ ಸಂದರ್ಭದಲ್ಲಿ ಚಿತ್ರರಂಗ ಅನುಭವಿಸಿದ ತಾಕಲಾಟಗಳನ್ನು ಅವಲೋಕಿಸಿ ಚಿತ್ರಕತೆಯನ್ನು ರಚಿಸಲಾಗಿದೆಯಂತೆ.
ಅನುಪಮ್ ಕೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದುಕೊಂಡಿರುವ ವೀರೇಶ್ ಕೇಶವ್ ಚಿತ್ರದ ನಾಯಕ. ಈಗಾಗಲೇ ನರಗುಂದ ಬಂಡಾಯ ಮತ್ತು ಯುವರತ್ನ ಚಿತ್ರಗಳಲ್ಲಿ ಸಣ್ಣ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಈಗ ” ಕಾಕ್ಟೈಲ್’ ಸಿನಿಮಾ ಮೂಲಕ ನಾಯಕರಾಗಿ ಪರಿಚಯಗೊಳ್ಳುತ್ತಿದ್ದಾರೆ. ನಾಯಕಿಯಾಗಿ ಚರಿಷ್ಮಾ ನಟಿಸುತ್ತಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹಾವು ಕಡಿತ
ಉಳಿದಂತೆ ಶೋಭರಾಜ್, ರಮೇಶ್ ಪಂಡಿತ್, ಶಿವಮಣಿ, ಕರಿಸುಬ್ಬು, ಚಂದ್ರಕಲಾ ಮೋಹನ್, ಮಹಾಂತೇಶ್ ಹಿರೇಮಠ್ ಸೇರಿದಂತೆ ಬಹುದೊಡ್ಡ ಕಲಾವಿದರ ದಂಡೇ ಇರಲಿದೆ. ಚಿತ್ರಕ್ಕೆ ಲೋಕಿತ ವಸ್ಯ ಸಂಗೀತ, ರವಿವರ್ಮ ಛಾಯಾಗ್ರಹಣ, ಮೋಹನ್ ಸಂಕಲನವಿದೆ. ವಿಜಯಲಕ್ಷೀ ಕಂಬೈನ್ಸ್ ನಡಿ ಡಾ.ಶಿವಪ್ಪ ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.