Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು
Team Udayavani, Sep 25, 2024, 6:49 PM IST
ವೈದ್ಯಕೀಯ ವಿಷಯಕ್ಕೆ ಸಂಬಂಧಪಟ್ಟ ಕಥೆಯನ್ನಿಟ್ಟು ಕೊಂಡು ತಯಾರಾಗಿರುವ “ಕಂಟೈನರ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರಕ್ಕೆ ಸೆನ್ಸಾರ್‌ನಿಂದ “ಯು’ ಪ್ರಮಾಣ ಪತ್ರ ಸಿಕ್ಕಿದೆ. ಎಸ್.ನರಸಿಂಹಮೂರ್ತಿ ಈ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ.
ಈ ಹಿಂದೆ ಇವರು “ಗರುಡಾಕ್ಷ’ ಎಂಬ ಚಿತ್ರ ನಿರ್ಮಾಣ ಮಾಡಿದ್ದರು. ಇತ್ತೀಚೆಗೆ “ಕಂಟೈನರ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಡಗಿನಲ್ಲಿ ಕಂಟೈನರ್ ಸಾಗಿಸುವಾಗ ಅಚಾತುರ್ಯದಿಂದ ಅದರ ಒಳಗಡೆ ಕಾರ್ಮಿಕನೊಬ್ಬ ಬಂದಿಯಾಗುತ್ತಾನೆ. ಒಂದು ದಿನದಲ್ಲಿ ನಡೆಯುವ ಘಟನೆಯಲ್ಲಿ ಆತ ಹೊರಗೆ ಬರುತ್ತಾನಾ? ಅಲ್ಲೇ ನರಳುತ್ತಾನಾ? ಎಂಬುದನ್ನು ಕುತೂಹಲದೊಂದಿಗೆ ತೋರಿಸಲಾಗಿದೆ ಎನ್ನುವುದು ತಂಡದ ಮಾತು.
ಕಾರ್ಮಿಕನಾಗಿ ದತ್ತಾತ್ರೇಯ ಪೂಜಾರಿ ತೆರಮೇಲೆ ಕಾಣಿಸಿಕೊಂಡಿದ್ದಾರೆ. ಪುಣ್ಯಗೌಡ ನಾಯಕಿ. ಉಳಿದಂತೆ ಮಂಜುನಾಥ್ .ಜಿ, ರಂಗನಾಥ್, ಮಂಜು.ಬಿ.ಕೆ, ಉದಯಕುಮಾರ್ ಮುಂತಾದವರು ನಟಿಸಿದ್ದಾರೆ.
ಅಲಂಕಾರ್ ಸಂಗೀತ, ಶ್ರೀನಿವಾಸ್ ಛಾಯಾಗ್ರಹಣವಿದೆ. ಬೆಂಗಳೂರು, ಮಂಗಳೂರು ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ದಸರಾ ನಂತರ ತೆರೆಗೆ ತರಲು ತಂಡವು ಯೋಜನೆ ರೂಪಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.