ಮತ್ತೆ ಹೊಸ ಗೆಟಪ್‌ನಲ್ಲಿ ಕ್ರೇಜಿಸ್ಟಾರ್
Team Udayavani, Oct 21, 2019, 3:00 AM IST
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಸಿನಿಮಾಗಳಲ್ಲಿ ಹೊಸ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಳ್ಳೋದು ನಿಮಗೆ ಗೊತ್ತೇ ಇದೆ. ಇತ್ತೀಚೆಗೆ ರವಿಚಂದ್ರನ್ ತಮ್ಮ ಹೊಸ ಸಿನಿಮಾ “ರವಿ ಬೋಪಣ್ಣ’ ಚಿತ್ರಕ್ಕಾಗಿ ಬಿಳಿ ಗಡ್ಡ ಬಿಟ್ಟು, ತುಂಬಾ ವಯಸ್ಸಾದ ಗೆಟಪ್‌ನಲ್ಲಿದ್ದರು.
ಆ ಚಿತ್ರದ ಚಿತ್ರೀಕರಣ ಸತತವಾಗಿ ನಡೆಯುತ್ತಿದ್ದು, ಬೆಂಗಳೂರು, ಮಡಿಕೇರಿ ಸುತ್ತಮುತ್ತ ನಡೆದಿದೆ. ಈಗ ರವಿಚಂದ್ರನ್ ಮತ್ತೆ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಗಡ್ಡ ತೆಗೆದು, ಸಖತ್ ಸ್ಟೈಲಿಶ್ ಆಗಿ ಮೀಸೆ ಬಿಟ್ಟು, ಮತ್ತೊಂದು ಹೊಸ ಗೆಟಪ್ ಮೂಲಕ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ “ಆಯುಷ್ಮಾನ್ ಭವ’ ಚಿತ್ರದ ಆಡಿಯೋ ಬಿಡುಗಡೆಗೆ ಹೊಸ ಗೆಟಪ್‌ನಲ್ಲಿ ಎಂಟ್ರಿಕೊಟ್ಟಿದ್ದರು.
ಅಂದಹಾಗೆ, “ರವಿ ಬೋಪಣ್ಣ’ ಸೈಬರ್ ಕ್ರೈಮ್ ಸುತ್ತ ನಡೆಯುವ ಕಥೆಯಾಗಿದ್ದು, ರವಿಚಂದ್ರನ್ ಇಲ್ಲಿ ಸೈಬರ್ ಸೆಲ್‌ನ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಚಿತ್ರದಲ್ಲಿ ಸ್ನೇಹಕ್ಕೂ ಹೆಚ್ಚಿನ ಮಹತ್ವವಿದೆಯಂತೆ. ಕಾವ್ಯಾ ಶೆಟ್ಟಿ “ರವಿ ಬೋಪಣ್ಣ’ದ ನಾಯಕಿ. ಈ ಚಿತ್ರದಲ್ಲಿ ನಟ ಸುದೀಪ್ ಕೂಡಾ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.