Dandatheertha; ಚಿತ್ರೀಕರಣದತ್ತ ಹೊಸಬರ ಕಾಮಿಡಿ-ಥ್ರಿಲ್ಲರ್‌ ಚಿತ್ರ

Team Udayavani, Dec 25, 2023, 1:30 PM IST

Dandatheertha; ಚಿತ್ರೀಕರಣದತ್ತ ಹೊಸಬರ ಕಾಮಿಡಿ-ಥ್ರಿಲ್ಲರ್‌ ಚಿತ್ರ

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ದಂಡ ತೀರ್ಥ’ ಸಿನಿಮಾದ ಟೈಟಲ್‌ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪಸಲ್ಸ್‌ ಗೇಮ್‌ ಮೂಲಕ ಚಿತ್ರತಂಡ ವಿಭಿನ್ನವಾಗಿ “ದಂಡ ತೀರ್ಥ’ ಸಿನಿಮಾದ ಟೈಟಲ್‌ ಅನ್ನು ಅನಾವರಣಗೊಳಿಸಿತು.

ಇಲ್ಲಿಯವರೆಗೆ ಸುಮಾರು 70ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ಹರಿಪ್ರಾಣ “ದಂಡ ತೀರ್ಥ’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

“ಇದೊಂದು ಕಾಮಿಡಿ-ಥ್ರಿಲ್ಲರ್‌ ಶೈಲಿಯ ಸಿನಿಮಾ. ನಮ್ಮ ನಡುವೆಯೇ ನಡೆದಿರುವ ಕೆಲ ನೈಜ ಘಟನೆಯನ್ನು ಆಧಾರವಾಗಿಟ್ಟುಕೊಂಡು, ಅದಕ್ಕೆ ಒಂದಷ್ಟು ಕಾಲ್ಪನಿಕ ಅಂಶಗಳನ್ನು ಸೇರಿಸಿ ಈ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ. ಮೀಡಿಯಾದಲ್ಲಿ ನಡೆಯುವ ಸ್ಟಿಂಗ್‌ ಆಪರೇಷನ್‌ ಸುತ್ತ ಸಿನಿಮಾದ ಕಥೆ ನಡೆಯುತ್ತದೆ. ಜೊತೆಗೊಂದು ರಿವೇಂಜ್‌ ಸ್ಟೋರಿ ಕೂಡ ಸಿನಿಮಾದಲ್ಲಿದೆ.

“ದಂಡ’ ಎಂದರೆ ಶಿಕ್ಷೆ “ತೀರ್ಥ’ ಎಂದರೆ ಪ್ರಸಾದ ಅಥವಾ ಪ್ರತಿಫ‌ಲ ಎಂಬ ಅರ್ಥವಿದೆ. ಸಿನಿಮಾದ ಕಥೆಗೆ ಹೊಂದಾಣಿಕೆಯಾಗುತ್ತದೆ ಎಂಬ ಕಾರಣಕ್ಕೆ “ದಂಡ ತೀರ್ಥ’ವನ್ನು ಟೈಟಲ್‌ ಆಗಿ ಇಟ್ಟುಕೊಂಡಿದ್ದೇವೆ’ ಎಂಬುದು ಸಿನಿಮಾದ ಟೈಟಲ್‌ ಮತ್ತು ಕಥಾಹಂದರದ ಬಗ್ಗೆ ಚಿತ್ರತಂಡದ ವಿವರಣೆ.

“ದಂಡ ತೀರ್ಥ’ ಸಿನಿಮಾದಲ್ಲಿ ಅವಿನಾಶ್‌, ರಜಿನಿಕಾಂತ್‌, ರೇಣುಕಾ ಪ್ರಸಾದ್‌, ಕುರಿ ಪ್ರತಾಪ್‌, ಚಂದ್ರಪ್ರಭ, ಪೂಜಾ ರಾಮಚಂದ್ರ, ಮಾನಸ ಗೌಡ, ಪುನೀತ್‌, ಬೇಬಿ ಶಾನ್ವಿ, ಜ್ಯೋತಿ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

“ಪ್ರಾಣ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ದಂಡ ತೀರ್ಥ’ ಸಿನಿಮಾಕ್ಕೆ ಜಿ. ರಂಗಸ್ವಾಮಿ ಛಾಯಾಗ್ರಹಣವಿದೆ. ಸದ್ಯ ಟೈಟಲ್‌ ಬಿಡುಗಡೆ ಮಾಡಿರುವ “ದಂಡ ತೀರ್ಥ’ ಚಿತ್ರತಂಡ ಮುಂಬರಲಿರುವ ಜನವರಿ ತಿಂಗಳಿನಿಂದ ಬೆಂಗಳೂರು, ಮೈಸೂರು ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Vijay raghavendra’s rudrabhishekam movie

Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.