ಲವ್ ಮಾಕ್ಟೇಲ್ 2 ಬಿಡುಗಡೆಗೆ ಸಿದ್ದ: ರಿಲೀಸ್ ದಿನಾಂಕ ಘೋಷಣೆ
Team Udayavani, Dec 20, 2021, 11:57 AM IST
ಕೊರೋನಾ ಭಯ ಮತ್ತು ಆತಂಕದ ನಡುವೆಯೇ 2020ರ ಆರಂಭದಲ್ಲಿ ತೆರೆಗೆ ಬಂದಿದ್ದ “ಲವ್ ಮಾಕ್ಟೇಲ್’ ಸ್ಯಾಂಡಲ್‌ವುಡ್ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಜೋಡಿಯಾಗಿ ಅಭಿನಯಿಸಿದ್ದ “ಲವ್ ಮಾಕ್ಟೇಲ್’ ಬಾಕ್ಸಾಫೀಸ್ ನಲ್ಲೂ ಉತ್ತಮ ಗಳಿಕೆ ಕಂಡಿದ್ದಲ್ಲದೆ, ಬಳಿಕ ಓಟಿಟಿಯಲ್ಲೂ ತೆರೆಕಂಡು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅದಾದ ಬಳಿಕ, ಇದೇ ಖುಷಿಯಲ್ಲಿ ಚಿತ್ರತಂಡ, “ಲವ್ ಮಾಕ್ಟೇಲ್ 2′ ಚಿತ್ರವನ್ನು ಘೋಷಣೆ ಮಾಡಿತ್ತು.
ಇದೀಗ “ಲವ್ ಮಾಕ್ಟೇಲ್-2′ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರ “ಯು’ ಸರ್ಟಿಫಿಕೆಟ್ ಪಡೆದುಕೊಳ್ಳುವ ಮೂಲಕ ಸೆನ್ಸಾರ್‌ನಿಂದಲೂ ಬಿಡುಗಡೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದೆ. ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಚಿತ್ರದ ಹಾಡುಗಳಿಗೆ ಕೂಡ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಇದೀಗ “ಲವ್ ಮಾಕ್ಟೇಲ್ 2′ ಚಿತ್ರದ ಬಿಡುಗಡೆಯ ದಿನಾಂಕ ಕೂಡ ಅನೌನ್ಸ್ ಮಾಡಿದೆ.
ಮುಂಬ ರುವ ಫೆಬ್ರವರಿ 11ರಂದು ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿರುವ ಚಿತ್ರತಂಡ ಈ ಮಾಹಿತಿ ಹಂಚಿಕೊಂಡಿದೆ.
ಇದನ್ನೂ ಓದಿ:36 ವರ್ಷಗಳ ಬಳಿಕ ಈಡೇರಿತು ಕಿಚ್ಚನ ಆಸೆ: ಫೋಟೋ ಹಿಂದಿದೆ ಇಂಟರೆಸ್ಟಿಂಗ್ ಕಹಾನಿ!
“ಲವ್ ಮಾಕ್ಟೇಲ್-2′ ಚಿತ್ರದ ಹಾಡುಗಳಿಗೆ ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆ ಯಿದೆ. ಚಿತ್ರದ ಹಾಡುಗಳಿಗೆ ರಾಘವೇಂದ್ರ ಕಾಮತ್ ಸಾಹಿತ್ಯವಿದೆ. ಚಿತ್ರಕ್ಕೆ ಕ್ರೇಜಿಮೈಂಡ್ಸ್ ಶ್ರೀ ಛಾಯಾಗ್ರಹಣ ಮತ್ತು ಸಂಕಲವಿದೆ. “ಕೃಷ್ಣ ಟಾಕೀಸ್’ ಬ್ಯಾನರ್‌ನಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಿರ್ಮಿಸಿರುವ “ಲವ್ ಮಾಕ್ಟೇಲ್-2′ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.