Darshan @ 25: ಫೆ.17ಕ್ಕೆ ಅದ್ಧೂರಿ ಕಾರ್ಯಕ್ರಮ
Team Udayavani, Feb 12, 2024, 3:15 PM IST
ನಟ ದರ್ಶನ್ ಅಭಿಮಾನಿಗಳಿಗೆ ಎರಡೆರಡು ಸಂಭ್ರಮ. ಫೆ.16 ದರ್ಶನ್ ಹುಟ್ಟುಹಬ್ಬದ ಖುಷಿಯಾದರೆ, ಫೆ.17ರಂದು 25ನೇ ವರ್ಷದ ಸಂಭ್ರಮ.
ಹೌದು, ನಟ ದರ್ಶನ್ ಚಂದನವನಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ದರ್ಶನ್ ಅವರ ಅಭಿಮಾನಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅದ್ಧೂರಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಶ್ರೀರಂಗ ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ. ಜೊತೆಗೆ ಹಲವು ಸಾಮಾಜಿಕ ಕಾರ್ಯಕ್ರಮಗಳು ಇದೇ ವೇಳೆ ಜರುಗಲಿದೆ. ಇವೆಲ್ಲ ಕಾರ್ಯಗಳ ಉಸ್ತುವಾರಿಯನ್ನು ದರ್ಶನ್ ಅವರ ಆತ್ಮೀಯರಾದ ಎಸ್. ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.