“ದರ್ಶನ್’ ಸೆರೆಹಿಡಿದ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ
Team Udayavani, Feb 20, 2019, 11:02 AM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗಷ್ಟೇ ತಮ್ಮ 42ನೇ ಹುಟ್ಟುಹಬ್ಬವನ್ನು ಸರಳವಾಗಿ ಅಭಿಮಾನಿಗಳ ಜೊತೆ ಆಚರಿಸಿಕೊಂಡಿದ್ದಾರೆ. ಈ ನಡುವೆ ದರ್ಶನ್ ತೂಗುದೀಪ್ ಸೆರೆ ಹಿಡಿದಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ ಕೂಡ ಆಯೋಜನೆಯಾಗಿದೆ. ಹೌದು, ದರ್ಶನ್ ಅರಣ್ಯದಲ್ಲಿ ಸೆರೆ ಹಿಡಿದಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ಮಾರ್ಚ್ 1 ರಿಂದ 3 ರವರೆಗೆ “ಲೈಫ್ ಆನ್ ದಿ ವೈಲ್ಡ್ ಸೈಡ್’ ಹೆಸರಿನಲ್ಲಿ ನಡೆಯಲಿದೆ.
ಅರಣ್ಯ ಇಲಾಖೆ ಸಹಯೋಗದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜನೆಗೊಳ್ಳುತ್ತಿದ್ದು, ಈ ಪ್ರದರ್ಶನದಲ್ಲಿ ದರ್ಶನ್ ಸೆರೆ ಹಿಡಿದ ಛಾಯಾಚಿತ್ರಗಳ ಮಾರಾಟವಿದ್ದು, ಅದರಿಂದ ಬಂದ ಹಣವನ್ನು ವನ್ಯಜೀವಿ ಸಂರಕ್ಷಣಾ ನಿಧಿಗೆ ಬಳಕೆಯಾಗಲಿದೆ. ಅಲ್ಲದೇ ಒಂದು ಛಾಯಾಚಿತ್ರಕ್ಕೆ ಎರಡರಿಂದ ಎರಡೂವರೆ ಸಾವಿರ ನಿಗದಿ ಮಾಡಲಾಗಿದ್ದು, ಎರಡೂವರೆ ಸಾವಿರ ಕೊಟ್ಟರೆ ದರ್ಶನ್ ಆಟೋಗ್ರಾಫ್ ಇರುವ ಚಿತ್ರ ಸಹ ಲಭ್ಯವಾಗಲಿದೆ.
Darshan Thoogudeepa Showcases
“Life on the Wild Side”
Exhibition proceeds earmarked for various conservation causes by Karnataka Forest Department
Exhibition Date :- 1st , 2nd and 3rd of March 2019
Venue : Hotel Sandesh the Prince, Mysuru pic.twitter.com/wOZlm519bo— Darshan Thoogudeepa (@dasadarshan) February 20, 2019
ಮುಖ್ಯವಾಗಿ ವಿಶ್ವ ವನ್ಯಜೀವಿ ದಿನವಾದ ಮಾರ್ಚ್ 3ರಂದು ದರ್ಶನ್ ಸಹ ಭಾಗವಹಿಸುತ್ತಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ತಾವು ಸಫಾರಿಗೆ ತೆರಳಿದ್ದಾಗ, ಪ್ರಾಣಿಗಳ ಫೋಟೋ ಕ್ಲಿಕ್ಕಿಸುತ್ತಿರುವ ವಿಡಿಯೋವನ್ನು ಹಾಕುವುದರ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.