Renukaswamy Case: ಸೆ.12ರವರೆಗೆ ದರ್ಶನ್ & ಗ್ಯಾಂಗ್‌ಗೆ ಜೈಲೇ ಗತಿ
ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, Sep 9, 2024, 2:21 PM IST
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy Case) ಜೈಲಿನಲ್ಲಿರುವ ನಟ ದರ್ಶನ್(Darshan) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೋಮವಾರ(ಸೆ.9ರಂದು) ವಿಸ್ತರಣೆ ಮಾಡಲಾಗಿದೆ.
ವಿಡಿಯೋ ಕಾನ್ಫರೆನ್ಸ್ ವಿಚಾರಣೆಗೆ ಹಾಜರಾದ ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟಿನಲ್ಲಿ ವಿಚಾರಣೆ ನಡೆಸಿತು.
ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಇನ್ನೊಂದೆಡೆ ದರ್ಶನ್ ಅವರು ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ನಿರ್ಬಂಧವನ್ನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಸಂಬಂಧ ತನಿಖಾಧಿಕಾರಿ ಎಸಿಪಿ ಚಂದನ್ ಡಿಜಿಟಲ್ ಎವಿಡೆನ್ಸ್ ಗಳಾದ ಪೆನ್ ಡ್ರೈವ್, ಸಿಡಿ, ಡಿವಿಡಿ, ಹಾರ್ಡ್ ಡಿಸ್ಕ್ ಕಂ ಪೆನ್ ಡ್ರೈವ್ ಸೇರಿ ಒಟ್ಟು 60 ಡಿಜಿಟಲ್ ಎವಿಡೆನ್ಸ್‌ಗಳನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಪೊಲೀಸರು ಪ್ರಕರಣ ಸಂಬಂಧ 3991 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿತ್ತು. ಕೋರ್ಟ್‌ಗೆ ಸಲ್ಲಿಕೆ ಮಾಡಿರುವ ದೋಷಾರೋಪಪಟ್ಟಿಯಲ್ಲಿ ಆರೋಪಿಗಳ ವಿರುದ್ಧ ಹಲವು ಸಾಕ್ಷ್ಯಗಳನ್ನು ಉಲ್ಲೇಖ ಮಾಡಲಾಗಿದೆ. 3 ಪ್ರತ್ಯಕ್ಷ ಸಾಕ್ಷಿಗಳಿದ್ದು, ಎಫ್ಎಸ್ಎಲ್ ಮತ್ತು ಸಿಎಫ್ಎಸ್ಎಲ್ನಿಂದ 8 ವರದಿಗಳಿವೆ. 27 ಜನರ 164ರ ಅಡಿಯಲ್ಲಿ ಹೇಳಿಕೆ, 161 ಅಡಿಯಲ್ಲಿ 70 ಜನರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ 59 ಜನ ಸಮಕ್ಷಮದಲ್ಲಿ ಮಹಜರು ಮಾಡಲಾಗಿದೆ. 8 ವೈದ್ಯರು, ತಹಶೀಲ್ದಾರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಾಕ್ಷಿ ಕೂಡ ಉಲ್ಲೇಖ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.