ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ : ಸ್ಟಾರ್ ನಟರ ಆಕ್ರೋಶ
Team Udayavani, Dec 16, 2021, 12:07 PM IST
ಬೆಂಗಳೂರು : ಮಹಾರಾಷ್ಟ್ರ ಏಕೀಕರಣ ಸಮಿತಿ ಅಧ್ಯಕ್ಷ ದೀಪಕ ದಳವಿಗೆ ಕಪ್ಪು ಮಸಿ ಬಳದಿರುವುದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಪುಂಡತನ ಮೆರೆದಿದ್ದನ್ನು ಖಂಡಿಸಿ ಕನ್ನಡದ ಸ್ಟಾರ್ ನಟರು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದಿರುವ ನಟ ದರ್ಶನ್, ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ ಎಂದಿದ್ದಾರೆ.
ಇತ್ತರ ಹಿರಿಯ ನಟ ಶಿವರಾಜ್ ಕುಮಾರ್ ಕೂಡ ಕನ್ನಡದ ಪರ ನಿಂತಿದ್ದು, ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ ಎಂದು ಬರೆದಿದ್ದಾರೆ. ಅಲ್ಲದೆ, #ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ #releasekannadaactivists ಎಂದು ಪೋಸ್ಟ್ ಮಾಡಿದ್ದಾರೆ.
ಪ್ರಜ್ವಲ್ ದೇವರಾಜ್ ಇನ್ ಸ್ಟಾಗ್ರಾಮ್ ನಲ್ಲಿ ಬರೆದಿದ್ದು, ಕನ್ನಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲಿ ಕನ್ನಡ ಹೋರಾಟಗಾರರನ್ನು ಬಿಡುಗಡೆ ಗೊಳಿಸಿ ಜೈ ಕನ್ನಡ ಜೈ ಕರ್ನಾಟಕ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.