ಇನ್ಸ್‌ಪೆಕ್ಟರ್ ವಿಕ್ರಂ ಓಟ ಜೋರು
Team Udayavani, Feb 14, 2021, 9:26 AM IST
ನಟ ದರ್ಶನ್ ಅವರ “ರಾಬರ್ಟ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಆದರೆ, ಆ ಚಿತ್ರಕ್ಕೂ ಮೊದಲೇ ಅವರ ಅಭಿಮಾನಿಗಳು ತೆರೆಮೇಲೆ ಅವರನ್ನು ನೋಡಿ ಆನಂದಿಸುತ್ತಿದ್ದಾರೆ. ಅದು “ಇನ್ಸ್‌ಪೆಕ್ಟರ್ ವಿಕ್ರಂ’ ಸಿನಿಮಾ ಮೂಲಕ.
ಹೌದು, ದರ್ಶನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ “ಇನ್ಸ್‌ಪೆಕ್ಟರ್ ವಿಕ್ರಂ’ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗ ಸ್ವತಃ ದರ್ಶನ್ ಆ ಸಿನಿಮಾವನ್ನು ಕಣ್ತುಂಬಿಕೊಂಡು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಶುಕ್ರವಾರ “ಇನ್ಸ್‌ಪೆಕ್ಟರ್ ವಿಕ್ರಂ’ ತಂಡದೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ.
ಇದನ್ನೂ ಓದಿ:‘ಉಪ್ಪೆನಾ’ ಚಿತ್ರದ ಚೆಲುವೆ, ಕರಾವಳಿ ಬೆಡಗಿ ಕೃತಿ ಶೆಟ್ಟಿ ಕ್ಯೂಟ್ ಲುಕ್ಸ್
ಈ ಮೂಲಕ ಸುಮಾರು ಒಂದು ವರ್ಷಗಳ ಬಳಿಕ ದರ್ಶನ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದಂತಾಗಿದೆ. ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿದ ದರ್ಶನ್, “ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರದಲ್ಲಿ ಇಡೀ ತಂಡದ ಶ್ರಮ ಎದ್ದು ಕಾಣುತ್ತಿದೆ. ಜನ ಇದೇ ರೀತಿ ನೂರು ದಿನಗಳವರೆಗೆ ಈ ಸಿನಿಮಾವನ್ನು ನೋಡಬೇಕು’ ಎಂದರು.
ಈ ಚಿತ್ರದಲ್ಲಿ ದರ್ಶನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಅವರ ಪಾತ್ರವನ್ನು ಇಷ್ಟಪಟ್ಟಿದ್ದಾರೆ. ಚಿತ್ರ ಎರಡನೇ ವಾರವೂ ಬಹುತೇಕ ಕೇಂದ್ರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಕೊರೊನಾ ಬಳಿಕ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯುವ ಚಿತ್ರವಾಗಿ “ಇನ್ಸ್‌ಪೆಕ್ಟರ್ ವಿಕ್ರಂ’ ಹೊರಹೊಮ್ಮುತ್ತಿದೆ.
ಪ್ರಜ್ವಲ್ ಕೆರಿಯರ್‌ನಲ್ಲೇ ವಿಭಿನ್ನ ಸಿನಿಮಾ ಎನಿಸಿಕೊಂಡಿರುವ “ಇನ್ಸ್‌ಪೆಕ್ಟರ್ ವಿಕ್ರಂ’ಗೆ ನರಸಿಂಹ ಅವರ ನಿರ್ದೇಶನವಿದೆ. ವಿಖ್ಯಾತ್ ಈ ಚಿತ್ರದ ನಿರ್ದೇಶಕರು. ಅನೂಪ್ ಸೀಳೀನ್ ಸಂಗೀತ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.