![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 25, 2021, 9:26 AM IST
ದರ್ಶನ್ ನಟನೆಯ 55ನೇ ಚಿತ್ರ “ಕ್ರಾಂತಿ’ಗೆ ಮುಹೂರ್ತ ಇತ್ತೀಚೆಗೆ ನಡೆದಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರೀಕರಣದ ಸಮಯ.
ಹೌದು, ದರ್ಶನ್ ಅವರ “ಕ್ರಾಂತಿ’ ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗುತ್ತಿದೆ. ಮೊದಲ ಹಂತವಾಗಿ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ಮೂಲಕ ದರ್ಶನ್ ತುಂಬಾ ದಿನಗಳ ನಂತರ ಮತ್ತೆ ಚಿತ್ರೀಕರಣದ ಅಖಾಡಕ್ಕೆ ಇಳಿಯುತ್ತಿದ್ದಾರೆ. ದರ್ಶನ್ ಕೂಡಾ ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಚಿತ್ರದ ಮುಹೂರ್ತದ ದಿನ ತಾವು ಸಿದ್ಧವಾಗುತ್ತಿದ್ದ ವಿಡಿಯೋವನ್ನು ಚಿತ್ರೀಕರಿಸಿ ಅಭಿಮಾನಿಗಳ ಮುಂದಿಟ್ಟಿದ್ದರು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ:ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ
ಇನ್ನು, “ಕ್ರಾಂತಿ’ಗೆ ನಾಯಕಿಯಾಗಿ ರಚಿತಾ ರಾಮ್ ಆಯ್ಕೆಯಾಗಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್, ದರ್ಶನ್ ತಂದೆ ಪಾತ್ರದಲ್ಲಿ ನಟಿಸಲಿದ್ದಾರೆ. ಇನ್ನು, ಈ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ಕಳೆದ ಬಾರಿ “ಯಜಮಾನ’ ಚಿತ್ರದ ನಿರ್ದೇಶನದಲ್ಲೂ ಹರಿಕೃಷ್ಣ ಅವರು ತೊಡಗಿಕೊಂಡಿದ್ದರು. ಜೊತೆಗೆ ಪಿ.ಕುಮಾರ್ ಕೂಡಾ ನಿರ್ದೇಶಕರಾಗಿದ್ದರು. ಈ ಬಾರಿ ವಿ.ಹರಿಕೃಷ್ಣ ಅವರು ದರ್ಶನ್ ಅವರ 55ನೇ ಚಿತ್ರವನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ.
ಈ ಚಿತ್ರವನ್ನು “ಮೀಡಿಯಾ ಹೌಸ್ ಸ್ಟುಡಿಯೋ’ದಡಿ ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಇವರು ದರ್ಶನ್ ಅವರ “ಯಜಮಾನ’ ಚಿತ್ರವನ್ನು ನಿರ್ಮಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.