ದರ್ಶನ್ ಪುತ್ರನ ಓಪನ್ ಚಾಲೆಂಜ್!
ಬಾಟಲ್ ಓಪನ್ ಚಾಲೆಂಜ್‌ನಲ್ಲಿ ವಿನೀಶ್
Team Udayavani, Jul 8, 2019, 3:01 AM IST
ಈಗ ಎಲ್ಲೆಡೆ ಬಾಟಲ್ ಓಪನ್ ಚಾಲೆಂಜ್ ಸುದ್ದಿಯದ್ದೇ ಕಾರುಬಾರು. ಸದ್ಯಕ್ಕೆ ಸಾಮಾಜಿಕ ತಾಣದಲ್ಲಿ ಇದೊಂದು ಟ್ರೆಂಡ್ ಆಗಿರುವುದಂತೂ ಸುಳ್ಳಲ್ಲ. ಹಾಲಿವುಡ್‌ನಿಂದ ಶುರುವಾದ ಈ ಬಾಟಲ್ ಓಪನ್ ಚಾಲೆಂಜ್ ಅನ್ನು, ಈಗ ಸ್ಯಾಂಡಲ್‌ವುಡ್ ಮಂದಿ ಕೂಡ ಸವಾಲಾಗಿ ಸ್ವೀಕರಿಸಿರುವುದು ಗೊತ್ತೇ ಇದೆ. ಆ ಸಾಲಿಗೆ ಹೊಸ ಸೇರ್ಪಡೆ ಅಂದರೆ, ಅದು ದರ್ಶನ್ ಅವರ ಪುತ್ರ ವಿನೀಶ್.
ಹೌದು, ದರ್ಶನ್ ಅವರ ಪುತ್ರ ವಿನೀಶ್ ಕೂಡ ಬಾಟಲ್ ಓಪನ್ ಚಾಲೆಂಜ್ ಮಾಡಿದ್ದಾರೆ. ವಿನೀಶ್ ತಮ್ಮ ಕಾಲಿನಿಂದ ಬಾಟಲ್ ಓಪನ್ ಮಾಡಿ ಅಚ್ಚರಿ ಮೂಡಿಸಿರುವುದು ಸಾಕಷ್ಟು ಸುದ್ದಿಯಾಗಿದೆ. ಪುತ್ರನ ಈ ಬಾಟಲ್ ಓಪನ್ ಚಾಲೆಂಜ್ ಮಾಡುವ ವಿಡಿಯೋವನ್ನು ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.
#bottlecapchallange #vinish#stay hydrated pic.twitter.com/0fA5xpU337
— Vijayalakshmi Darshan (@vijayaananth2) July 7, 2019
ಸದ್ಯಕ್ಕೆ ಟಾಲಿವುಡ್, ಕಾಲಿವುಡ್, ಬಾಲಿವುಡ್ ಜೊತೆಗೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟರೆಲ್ಲರೂ ಈ ಬಾಟಲ್ ಓಪನ್ ಚಾಲೆಂಜ್ ಅನ್ನು ಸವಾಲಾಗಿ ಸ್ವೀಕರಿಸಿದ್ದು, ಅವರ ನಡುವೆ, ದರ್ಶನ್ ಅವರ ಪುತ್ರ ಕೂಡ ಈ ಸವಾಲು ಸ್ವೀಕರಿಸುವ ಮೂಲಕ ದರ್ಶನ್ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದಾರೆ. ಅದೇನೆ ಇರಲಿ, ಈ ಓಪನ್ ಬಾಟಲ್ ಚಾಲೆಂಜ್ ಅನ್ನು ಸ್ವೀಕರಿಸಿರುವ ವಿನೀಶ್, ಅದರಲ್ಲಿ ಯಶಸ್ಸು ಪಡೆದು, ದರ್ಶನ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರ ಪ್ರೀತಿಗೆ ಪಾತ್ರರಾಗಿದ್ದಾರೆ.
ವಿನೀಶ್ ಈಗಾಗಲೇ ತಮ್ಮ ತಂದೆಯ ಜೊತೆ ತೆರೆಯನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಸಿ “ಐರಾವತ’ ಚಿತ್ರದ ಒಂದು ದೃಶ್ಯದಲ್ಲಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ “ಯಜಮಾನ’ ಚಿತ್ರದ ಶೀರ್ಷಿಕೆ ಗೀತೆಯಲ್ಲೂ ಕಾಣಿಸಿಕೊಂಡಿದ್ದರು. ವಿನೀಶ್ ಅವರ ಈ ಪ್ರಯತ್ನ, ಸವಾಲುಗಳನ್ನು ನೋಡುತ್ತಿದ್ದರೆ, ಮುಂದಿನ ದಿನಗಳಲ್ಲಿ ಸಿನಿಮಾಗೆ ಎಂಟ್ರಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.