Dasappa Movie; ಗ್ರಾಮೀಣ ಸೊಗಡಿನ ‘ದಾಸಪ್ಪ’ ಚಿತ್ರದ ಟ್ರೇಲರ್ ರಿಲೀಸ್
Team Udayavani, May 31, 2024, 2:45 PM IST
“ದಾಸಪ್ಪ’ ಎಂಬ ಚಿತ್ರವೊಂದು ಬಿಡುಗಡೆಯ ಹಂತಕ್ಕೆ ಬಂದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ತಿಥಿ ಚಿತ್ರದ ಮೂಲಕ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕೀಲಾರ ಈ ಚಿತ್ರದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡಿದ ವಿಜಯ್, “ನಾನು ಮಂಡ್ಯ ಜಿಲ್ಲೆಯ ಕೀಲಾರದವನು. ದಾಸಪ್ಪ ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಎಲ್ಲಾ ಹಳ್ಳಿಗಳಲ್ಲಿ ಯಾವುದೇ ಕಾರ್ಯವಾದರೂ ದಾಸಪ್ಪ ಅವರು ಇರಲೇ ಬೇಕು. ಅಂತಹ ದಾಸಪ್ಪ ಎಂಬ ಪಾತ್ರದ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ತಿಥಿ ಚಿತ್ರದ ಸ್ಫೂರ್ತಿಯಿಂದ ಈ ಚಿತ್ರ ಮಾಡಿದ್ದೇನೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ನಾನೇ ಬರೆದಿದ್ದೇನೆ. ಆನಂದ್ ಕೆಂಪೇಗೌಡ ಕೆಬ್ಬಳ್ಳಿ ಈ ಚಿತ್ರದ ನಿರ್ಮಾಪಕರು. ತಿಥಿ ಖ್ಯಾತಿಯ ನಟ ತಮ್ಮಣ್ಣ ಅವರು ದಾಸಪ್ಪನಾಗಿ ಅಭಿನಯಿಸಿದ್ದಾರೆ. ಮಂಜು ಪಾವಗಡ, ವಿನೋದ್ ಗೊಬ್ರಗಾಲ, ಅಂಜನ ಗಿರೀಶ್, ಸುರಕ್ಷಿತ ಶೆಟ್ಟಿ, ಸಿಂಚನ ಗೌಡ ಮುಂತಾದವರು ಅಭಿನಯಿಸಿದ್ದಾರೆ. ಹಾಡುಗಳು ಹಾಗೂ ಸಾಹಸ ಸನ್ನಿವೇಶಗಳು ಇಲ್ಲದಿರುವುದು ಈ ಚಿತ್ರದ ವಿಶೇಷ. ಮಂಡ್ಯ, ಕೀಲಾರ, ಮದ್ದೂರಿನಲ್ಲಿ ಚಿತ್ರೀಕರಣವಾಗಿದೆ’ ಎಂದು ವಿವರ ನೀಡಿದರು.
“ನಿರ್ದೇಶಕರು ನನ್ನ ಸ್ನೇಹಿತರು. ಕಥೆ ಕೇಳಿ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ನಿರ್ಮಾಣದ ಜೊತೆಗೆ ಸಣ್ಣ ಪಾತ್ರದಲ್ಲೂ ಕಾಣಿಸಿ ಕೊಂಡಿರುವುದಾಗಿ ಸಹ ನಿರ್ಮಾಪಕ ಶ್ರೀನಿವಾಸ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.