ಕೊನೆಯ ಹಂತ ತಲುಪಿದ ‘ಡಿಸೆಂಬರ್ 24’
Team Udayavani, Mar 14, 2021, 12:24 PM IST
ಹೊಸಬರ ಡಿಸೆಂಬರ್ 24 ಚಿತ್ರ ಕೊನೆಯ ಹಂತದ ಚಿತ್ರೀಕರಣ ತಲುಪಿದ್ದು, ಮಾರ್ಚ್ 25ರಿಂದ 2ನೇ ಹಂತ ಆರಂಭವಾಗಲಿದೆ. ಹುಲಿಯೂರು ದುರ್ಗ, ಕುಣಿಗಲ್, ಮಾಗಡಿ ಸುತ್ತಮುತ್ತ ಈ ಹಂತದಲ್ಲಿ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.
ನಾಗರಾಜ್ ಎಂಜಿ ಗೌಡ ಅವರು ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ದೇವು ಹಾಗೂ ಮಂಜು ಡಿ.ಟಿ., ಬೆಟ್ಟೇಗೌಡ ಸೇರಿ ಬಂಡವಾಳ ಹೂಡಿದ್ದಾರೆ.
ನಮ್ಮ ದೇಶದಲ್ಲಿ ಪ್ರತಿದಿನ ಹುಟ್ಟುವ ನೂರು ಮಕ್ಕಳಲ್ಲಿ ಮೂವರು ಮಕ್ಕಳು ಉಸಿರಾಟದ ಸಮಸ್ಯೆಯಿಂದಲೇ ಮರಣ ಹೊಂದುತ್ತಿವೆ. ಇದಕ್ಕೆ ವೈದ್ಯಕೀಯ ಸಂಶೋಧನೆಯಲಿ ಈವರೆಗೆ ಯಾವುದೇ ನಿಖರ ಔಷಧಿಯನ್ನು ಕಂಡು ಹಿಡಿಯಲಾಗಿಲ್ಲ. ಕೆಲ ಸಂಶೋಧನೆಗಳು ನಡೆದಿದ್ದರೂ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಇಂತಹದೊಂದು ಅಂತರಾಷ್ಟ್ರೀಯ ಮಟ್ಟದ ಸಮಸ್ಯೆಯನ್ನು ಮುಂದಿಟ್ಟುಕೊಂಡು ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ. 2015ರಿಂದ 2019ರ ನಡುವೆ ನಡೆಯುವ ಕೆಲವೊಂದು ನೈಜ ಘಟನೆಗಳನ್ನಿಟ್ಟುಕೊಂಡು ಕಥೆ ಮಾಡಲಾಗಿದೆ.
ಈ ಚಿತ್ರದಲ್ಲಿ ನಾಯಕರಾಗಿ ಅಪ್ಪು ಬಡಿಗೇರ, ರವಿ ಕೆ.ಆರ್. ಪೇಟೆ, ರಘು ಶೆಟ್ಟಿ, ಜಗದೀಶ್ ರಾಮಾಚಾರಿ ಸಾಗರ್, ನಾಯಕಿಯರಾಗಿ ಭೂಮಿಕಾ ರಮೇಶ್, ಮಿಲನ ರಮೇಶ್ ಹಾಗೂ ದಿವ್ಯಾ ಆಚಾರ್ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.