ಮೇ 25ರಿಂದ ಧಾರಾವಾಹಿಗಳ ಚಿತ್ರೀಕರಣಕ್ಕೆ ನಿರ್ಧಾರ
Team Udayavani, May 7, 2020, 11:06 AM IST
ಕೊನೆಗೂ ಕಿರುತೆರೆ ಮಂದಿ ಮೊಗದಲ್ಲಿ ಮಂದಹಾಸ ಮೂಡಿದೆ. ಹೌದು, ಕಿರುತೆರೆಯ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ಕೊಟ್ಟಿದ್ದು, ಮೇ.25ರಿಂದ ಧಾರಾವಾಹಿಗಳ ಚಿತ್ರೀಕರಣಕ್ಕೆ ಚಾಲನೆ ದೊರೆಯಲಿದೆ.
ಈ ಸಂಬಂಧ ಬುಧವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್, “ಸರ್ಕಾರಕ್ಕೆ ಈ ಹಿಂದೆ ನಾವು ಕಿರುತೆರೆ ಚಿತ್ರೀಕರಣಕ್ಕೆ ಅನುಮತಿ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದೆವು. ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಸ್ಪಂದಿಸಿದ್ದರು. ಕಿರುತೆರೆ ಕ್ಷೇತ್ರ ಚಿತ್ರೀಕರಣ ನಿರ್ಬಂಧನೆಗೆ ಒಳಗಾಗುವುದಿಲ್ಲ. ಮನೆಯೊಳಗೆ ಚಿತ್ರೀಕರಣ ಮಾಡುವುದರಿಂದ ಶೂಟಿಂಗ್‌ಗೆ ಅನುಮತಿ ನೀಡಲಾಗಿತ್ತು. ಔಟ್ ಡೋರ್ ಚಿತ್ರೀಕರಣ ಹಾಗು ರಿಯಾಲಿಟಿ ಶೋಗಳಿಗೆ ಇನ್ನೂ ಅನುಮತಿ ಸಿಕ್ಕಿಲ್ಲ. ಧಾರಾವಾಹಿ ಚಿತ್ರೀಕರಣಕ್ಕೆ ಮಾತ್ರ ಅನುಮತಿ ದೊರೆತಿತ್ತು. ಈಗ ಮೇ.25 ರಿಂದ ಚಿತ್ರೀಕರಣಕ್ಕೆ ಹೋಗಲು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.
ಈ ಕುರಿತಂತೆ ನಾವುಗಳು ಕೆಲವು ವಾಹಿನಿಗಳು, ನಿರ್ಮಾಪಕರು, ತಂತ್ರಜ್ಞರ ಜೊತೆ ಚರ್ಚಿಸಿದ್ದು, ಅಸೋಸಿಯೇಷನ್‌ನ ಕಾರ್ಯಕಾರಿ ಸಮಿತಿಯು, ಧಾರಾವಾಹಿಗಳ ಚಿತ್ರೀಕರಣವನ್ನು ಮೇ 25ರಿಂದ ಪುನರಾಂಭಿಸುವ ತೀರ್ಮಾನ ಮಾಡಿದೆ. ಕೋವಿಡ್ 19 ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡೇ ಕೆಲಸ ಮಾಡುತ್ತೇವೆ. ಅದರಲ್ಲೂ ಕಡಿಮೆ ಜನರ ಜೊತೆ ಕೆಲಸ ಮಾಡಲುನಿರ್ಧರಿಸಲಾಗಿದೆ ‘ ಎಂದಿದ್ದಾರೆ.
ಇನ್ನು, ಕೋವಿಡ್ ದಿಂದ ಸಾಕಷ್ಟು ಸಮಸ್ಯೆಗಳಿದ್ದು, ಬಹುತೇಕ ಕಾರ್ಮಿಕರು, ತಂತ್ರಜ್ಞರು ಒಂದೆಡೆ ಇಲ್ಲದಿರುವ ಕಾರಣದಿಂದ ಮತ್ತು ಅವರ ಆರೋಗ್ಯದ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈಗಾಗಲೇ ಕೆಲವು ಚಾಲ್ತಿಯಲ್ಲಿದ್ದ ಧಾರಾವಾಹಿಗಳ ಚಿತ್ರೀಕರಣ ಲಾಕ್‌ಡೌನ್‌ನಿಂದ ಅರ್ಧದಲ್ಲೇ ನಿಂತಿದ್ದು, ಇಂದಿನ ಸ್ಥಿತಿಗೆ ಅನುಗುಣವಾಗಿ ಅಳವಡಿಸಿಕೊಂಡು ಚಿತ್ರೀಕರಣ ಮಾಡಲು ಸಾಕಷ್ಟು ಸಮಯಬೇಕಾಗಿರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.