ಭರ್ಜರಿ ಕಾಮಿಡಿ ಧಮಾಕ
Team Udayavani, Aug 22, 2022, 2:32 PM IST
ಪ್ರತಿ ಚಿತ್ರರಸಿಕರು ಸಿನಿಮಾ ನೋಡುವ ಪ್ರಮುಖ ಉದ್ದೇಶ ಮನರಂಜನೆ. ಅದರಲ್ಲಿಯೂ ಹಾಸ್ಯ ಸನ್ನಿವೇಶಗಳಿಗೆ ಮನಸೋಲದವರೇ ಇಲ್ಲ. ಹೀಗಿರುವಾಗ ಒಂದಿಡೀ ಚಿತ್ರವೇ ಕಾಮಿಡಿಮಯವಾಗಿದ್ದರೆ ಅದರತ್ತ ಪ್ರೇಕ್ಷಕರು ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಈ ಕಾರಣದಿಂದಲೇ ನಿರೀಕ್ಷೆ ಮೂಡಿಸಿರುವ “ಧಮಾಕ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.
ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಗಮನಸೆಳೆದಿರುವ “ಧಮಾಕ’ ಟ್ರೇಲರ್ ನೋಡುಗರಿಗೆ ಕಚಗುಳಿ ಇಡುತ್ತಿದೆ. ಮಧ್ಯಮ ವರ್ಗದ ಕುಟುಂಬದಲ್ಲಿ ನಡೆಯುವ ಕಥೆಯ ಎಳೆಯನ್ನು ಒಳಗೊಂಡ ಟ್ರೇಲರ್‌ನಲ್ಲಿ ಹೇಳಲಾಗಿದ್ದು, ಹಾಸ್ಯನಟ ಚಿಕ್ಕಣ್ಣ ನಿರೂಪಣೆಯಿಂದ ಶುರುವಾಗ ಟ್ರೇಲರ್‌ನಲ್ಲಿ ಭರ್ಜರಿ ಕಾಮಿಡಿ ಉಣ ಬಡಿಸಿದ್ದಾರೆ.
ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ನೋಡುಗರನ್ನು ನಕ್ಕು ನಲಿಸ್ತಾರೆ. ಇವರಿಗೆ ಜೋಡಿಯಾಗಿ ನಯನಾ ಮಿಂಚಿದ್ದಾರೆ. ಮನರಂಜನೆಯೇ ಪ್ರಧಾನವಾಗಿರುವ ಕಥೆ, ಅದಕ್ಕೆ ಪೂರಕವಾದ ಪಾತ್ರಗಳು ಮತ್ತು ಕ್ಷಣ ಕ್ಷಣವೂ ನಗೆಯುಕ್ಕಿಸುವಂತೆ ಪೋಣಿಸಿರುವ ಹಾಸ್ಯ ಸನ್ನಿವೇಶಗಳೊಂದಿಗೆ ಧಮಾಕ ಟ್ರೇಲರ್ ನೋಡುಗರಿಂದ ಮೆಚ್ಚುಗೆ ಪಡೆಯುತ್ತಿದೆ.
ಮೋಹನ್ ಜುನೇಜಾ, ಕೋಟೆ ಪ್ರಭಾಕರ್, ಮಿಮಿಕ್ರಿ ಗೋಪಾಲ್, ಅರುಣಾ ಬಾಲರಾಜ್ ಮುಂತಾದ ಕಲಾಬಳಗ ಚಿತ್ರದಲ್ಲಿದೆ. ಸಂಪೂರ್ಣ ಹಾಸ್ಯಮಯ ಕಥಾಹಂದರ ಹೊಂದಿರುವ ಧಮಾಕ ಚಿತ್ರವನ್ನು ಎಸ್ ಆರ್. ಮೀಡಿಯಾ ಪ್ರೊಡಕ್ಷನ್ ಬ್ಯಾನರ್‌ನಡಿ ಸುನೀಲ್.ಎಸ್.ರಾಜ್ ಮತ್ತು ಅನ್ನಪೂರ್ಣ ಪಾಟೀಲ್ ನಿರ್ಮಾಣ ಮಾಡಿದ್ದು, ಲಕ್ಷ್ಮೀ ರಮೇಶ್ ಈ ಚಿತ್ರದ ನಿರ್ದೇಶಕರು. ಚಿತ್ರಕ್ಕೆ ಹಾಲೇಶ್ ಎಸ್. ಛಾಯಾಗ್ರಹಣ, ವಿಕಾಸ್ ವಸಿಷ್ಠ ಸಂಗೀತ, ರಘು ಆರ್.ಕಜೆ ನೃತ್ಯ ನಿರ್ದೇಶನ ಮತ್ತು ವಿನಯ್ ಕೂರ್ಗ್ ಸಂಕಲನ ಸಿನಿಮಾಕ್ಕಿದೆ. ಟ್ರೇಲರ್ ಬಿಡುಗಡೆ ಮಾಡಿರುವ ಚಿತ್ರತಂಡ ಶೀಘ್ರದಲ್ಲಿ ಚಿತ್ರ ಬಿಡುಗಡೆ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.