ಒಟಿಟಿಯಲ್ಲಿ “ರತ್ನನ ಪ್ರಪಂಚ” | ಬಿಡುಗಡೆ ದಿನಾಂಕ ಘೋಷಣೆ
Team Udayavani, Oct 5, 2021, 3:15 PM IST
ಬೆಂಗಳೂರು : ಟ್ರೈಲರ್ ಮೂಲಕ ಸಿನಿ ರಸಿಕರಲ್ಲಿ ಕುತೂಹಲ ಮೂಡಿಸಿದ “ರತ್ನನ ಪ್ರಪಂಚ” ಸಿನಿಮಾ ಬಿಡುಗಡೆಯಾಗುತ್ತಿದೆ. ಡಾಲಿ ಧನಂಜಯ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾ ಇದೇ ತಿಂಗಳು 22 ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.
ಡಾಲಿ ಧನಂಜಯ್ ಅವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಝಿಯಾಗಿದ್ದಾರೆ. ಅವರು ನಟಿಸಿರುವ ಸಲಗ ಸಿನಿಮಾ ಇದೇ 14 ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ. ಇದರ ಜೊತೆಗೆ ಒಟಿಟಿಯಲ್ಲಿ ರತ್ನನ ಪ್ರಪಂಚ ತೆರೆದುಕೊಳ್ಳಲಿದೆ.
ಸ್ಯಾಂಡಲ್ವುಡ್ ನಟ ಧನಂಜಯ್ ರತ್ನಾಕರ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಬಿಡುಗಡೆಯಾಗಲಿದೆ. ಅಭಿಮಾನಿಗಳಿಗೆ ಇದರಿಂದ ತುಸು ಅಚ್ಚರಿಯಾಗಿದೆ. ಕಾರಣ, ‘ರತ್ನನ್ ಪ್ರಪಂಚ’ ಅಕ್ಟೋಬರ್ 22ರಂದು ಆಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಆಮೆಜಾನ್ ಪ್ರೈಮ್ ಹಾಗೂ ಧನಂಜಯ್ ಟ್ವೀಟ್ಗಳನ್ನು ಹಂಚಿಕೊಂಡಿದ್ದಾರೆ. ಆಮೆಜಾನ್ ಪ್ರೈಮ್ ಈ ಕುರಿತು ಟ್ವೀಟ್ ಮಾಡುತ್ತಾ, ‘ಒಂಬತ್ತು ಪಾತ್ರಗಳು, ಒಂದು ಕುತೂಹಲಕರ ಕತೆ’ ಎಂದು ಕ್ಯಾಪ್ಶನ್ ನೀಡಿದೆ.
Laughter + twist & turns + romance = Rathnakara’s life.
Watch him tickle your funnybones in #RathnanPrapanchaOnPrime , Oct 22. @PrimeVideoIN@Karthik1423 @Yogigraj @Reba_Monica @therohitpadaki @AJANEESHB @KRG_Studios pic.twitter.com/vZlEAzmwOg
— Dhananjaya (@Dhananjayaka) October 5, 2021
ಈ ಬಗ್ಗೆ ಟ್ವೀಟ್ ಮಾಡಿರುವ ನಾಯಕ ನಟ ಧನಂಜಯ್ ಟ್ವೀಟ್ , ‘ನಗು+ ತಿರುವು+ ಪ್ರೀತಿ= ರತ್ನನ್ ಪ್ರಪಂಚ’ ಎಂದು ಬರೆದುಕೊಂಡಿದ್ದಾರೆ.
ಇನ್ನು ‘ದಯವಿಟ್ಟು ಗಮನಿಸಿ’ ಚಿತ್ರದ ಮುಖಾಂತರ ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ್ದ ರೋಹಿತ್ ಪದಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡದ ಹಿರಿಯ ನಟಿ ಉಮಾಶ್ರೀ ಈ ಚಿತ್ರದಲ್ಲಿ ಧನಂಜಯ್ ತಾಯಿಯ ಪಾತ್ರವನ್ನು ನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.