’21 ಅವರ್ಸ್’ ಟೈಮ್ ಫಿಕ್ಸ್ ಮಾಡಿದ ಡಾಲಿ
Team Udayavani, Aug 22, 2021, 10:11 PM IST
ಬೆಂಗಳೂರು: ನಟ ಡಾಲಿ ಧನಂಜಯ್ ಸಿಕ್ಕಾಪಟ್ಟೆ ಬ್ಯುಝಿಯಾಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.
ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ತಯಾರಾಗಲಿರುವ ಈ ಚಿತ್ರಕ್ಕೆ ’21 ಅವರ್ಸ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಮೂಲಕ ಡಾಲಿ ಮಲಯಾಳಂಗೂ ಕಾಲಿಡಲಿದ್ದಾರೆ. ಈ ಚಿತ್ರದಲ್ಲಿ ಡಾಲಿ ನಾಯಕ ನಟರಾಗಿ ಅಭಿನಯಿಸಲಿದ್ದಾರೆ.
ಈ ಚಿತ್ರವನ್ನು ಜೈಶಂಕರ್ ಪಂಡಿತ್ ನಿರ್ದೇಶನ ಮಾಡುತ್ತಿದ್ದು, ಮಲಯಾಳಂನ ಖ್ಯಾತ ನಟ ಸುದೇವ್ ನಾಯರ್, ದುರ್ಗಾ ಕೃಷ್ಣ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಇಂದು ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.
Here is the first look of the film #Twentyonehours , a Kannada Malayalam venture directed by Jaishankar Pandit. @TheSudevNair pic.twitter.com/OVwnxkd7sw
— Dhananjaya (@Dhananjayaka) August 22, 2021
ಧನಂಜಯ್ ಅವರು ನಟಿಸಿರುವ ಸಲಗ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಬಡವ ರಾಸ್ಕಲ್, ಹೆಡ್ ಬುಷ್ ಸಿನಿಮಾಗಳ ಕೆಲಸ ಶುರುವಾಗಿದೆ. ಇವುಗಳ ಜೊತೆ ರತ್ನನ ಪ್ರಪಂಚ ಸಿನಿಮಾ ಕೂಡ ಸಿದ್ಧವಾಗುತ್ತಿದೆ. ಈ ಚಿತ್ರದ ಟೀಸರ್ ಕಳೆದ ಎರಡು ದಿನಗಳ ಹಿಂದೆಯಷ್ಟೆ ಬಿಡುಗಡೆಯಾಗಿದ್ದು,ನೋಡುಗರಿಂದ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿದೆ.
ಇನ್ನು ಹೆಡ್ ಬುಷ್ ಸಿನಿಮಾದಲ್ಲಿ ಡಾನ್ ಜಯರಾಜ್ ಪಾತ್ರದಲ್ಲಿ ಡಾಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೊದಲ ಲುಕ್ ಟೀಸರ್ ಕೂಡ ಇಂದು ಸಾಯಂಕಾಲ ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.