Kannada Cinema: ಹಯಗ್ರೀವನಾದ ಧನ್ವೀರ್; ಹೊಸ ಚಿತ್ರಕ್ಕೆ ಮುಹೂರ್ತ

Team Udayavani, Feb 5, 2024, 12:01 PM IST

Kannada Cinema: ಹಯಗ್ರೀವನಾದ ಧನ್ವೀರ್; ಹೊಸ ಚಿತ್ರಕ್ಕೆ ಮುಹೂರ್ತ

ಸಮೃದ್ಧಿ ಮಂಜುನಾಥ್‌ ನಿರ್ಮಿಸುತ್ತಿರುವ, ರಘುಕುಮಾರ್‌ ಓ.ಆರ್‌ ನಿರ್ದೇಶನದಲ್ಲಿ ಧನ್ವೀರ್‌ ನಾಯಕರಾಗಿ ನಟಿಸುತ್ತಿರುವ ಹಯಗ್ರೀವ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಹಲವಾರು ಗಣ್ಯರು ಮುಹೂರ್ತ ಸಮಾರಂಭ ದಲ್ಲಿ ಭಾಗವಹಿಸಿದ್ದರು. ಮುಹೂರ್ತ ಸಮಾರಂಭದ ನಂತರ ಮೈಸೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

“ಹಯಗ್ರೀವ, ನಮ್ಮ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ ಮಂಜುನಾಥ್‌, ನಾನು ಯೂಟ್ಯೂಬ್‌ನಲ್ಲಿ “ದಿ ಬೆಲ್‌’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ ನಿರ್ದೇಶಕ ರಘುಕುರ್ಮಾ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‌ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್‌ ಹಾಗೂ ಸಂಜನಾ ಆನಂದ್‌ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೂಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

“ನಿರ್ಮಾಪಕರು ಫೋನ್‌ ಮಾಡಿ ಸಿನಿಮಾ ಮಾಡಿ ಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ,ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್‌ ಇದೆ. ಲವ್‌, ಸೆಂಟಿಮೆಂಟ್, ಸಸ್ಪೆನ್ಸ್‌ ಸೇರಿದಂತೆ ಕಮರ್ಷಿಯಲ್‌ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಹಯಗ್ರೀವ ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ ಹಯಗ್ರೀವ ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ. ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ. ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ. ಕಾರ್ತಿಕ್‌, ಛಾಯಾಗ್ರಹಣ ಹಾಗೂ ಉಮೇಶ್‌ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್‌ ರಾಜ್‌ ಹಾಗೂ ಚೇತನ್‌ ಸಿದ್‌ ಬರೆದಿದ್ದಾರೆ’ ಮಾಹಿತಿ ನೀಡಿದರು ನಿರ್ದೇಶಕರು.

“ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿ ಯಾಗುವಂತಹ ಕಥೆ ಇದೆ. ಈ ಚಿತ್ರದಲ್ಲಿ ನೀಗ್ರೋಗಳ ಜೊತೆಗೆ ಫೈಟ್‌ ಇದೆ. ಬಜಾರ್‌ ನಂತರ ಸಿಕ್ಸ್‌ ಪ್ಯಾಕ್‌ ಮಾಡಿ ಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಕಥೆ ಮತ್ತು ಪಾತ್ರ ವಿಭಿನ್ನವಾಗಿದೆ’ ನಾಯಕ ಧನ್ವೀರ್‌. ಚಿತ್ರದಲ್ಲಿ ಸಂಜನಾ ಆನಂದ್‌ನಾಯಕಿ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.