UK Love Story Movie; ಜವಾರಿ ಹುಡುಗನಾದ ಧರ್ಮ ಕೀರ್ತಿರಾಜ್
Team Udayavani, Feb 8, 2024, 6:16 PM IST
ನಟ ಧರ್ಮ ಕೀರ್ತಿರಾಜ್ ಈ ಬಾರಿ ಉತ್ತರ ಕರ್ನಾಟಕದ ಹುಡುಗನಾಗಿ ತೆರೆಮೇಲೆ ಬರುವ ತಯಾರಿಯಲ್ಲಿದ್ದಾರೆ. ಹೌದು, ಧರ್ಮ ಕೀರ್ತಿರಾಜ್ ನಾಯಕನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ “ಯುಕೆ ಲವ್ಸ್ಟೋರಿ’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ನೆರವೇರಿತು.
ನಟ ಅಜೇಯ್ ರಾವ್ “ಯುಕೆ ಲವ್ಸ್ಟೋರಿ’ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.
“ರೊಮಾನಸ್ ಕ್ರಿಯೇಶನ್ಸ್’ ಬ್ಯಾನರಿನಲ್ಲಿ ಎಸ್. ಜೆ. ಸುರೇಶ್ ಆರೋಕ್ಯ ರಾಜ್ ನಿರ್ಮಿಸುತ್ತಿರುವ “ಯುಕೆ ಲವ್ಸ್ಟೋರಿ’ ಸಿನಿಮಾಕ್ಕೆ ಯುವ ಪ್ರತಿಭೆ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. “ಯುಕೆ ಲವ್ ಸ್ಟೋರಿ’ ಸಿನಿಮಾದಲ್ಲಿ ನಾಯಕ ಧರ್ಮ ಕೀರ್ತಿರಾಜ್ ಅವರಿಗೆ ಯುವನಟಿ ಕಾವ್ಯಾ ನಾಯಕಿಯಾಗಿ ಅಭಿನಯಿಸುತ್ತಿದ್ದು, ಉಳಿದಂತೆ ಸಾಧುಕೋಕಿಲ, ಗೋವಿಂದೇ ಗೌಡ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
“ಯುಕೆ ಲವ್ ಸ್ಟೋರಿ’ ಸಿನಿಮಾದ ಮುಹೂರ್ತ ವೇಳೆ ಮಾತನಾಡಿದ ನಿರ್ದೇಶಕ ವಿಜಯ್, “ಇದೊಂದು ಅಪ್ಪಟ ಉತ್ತರ ಕರ್ನಾಟಕದ ಸೊಗಡಿನ ಸಿನಿಮಾ. ಇಡೀ ಉತ್ತರ ಕರ್ನಾಟಕದ ವಾತಾವರಣವನ್ನು ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಲವ್ಸ್ಟೋರಿ ಜೊತೆಗೆ ಇಡೀ ಫ್ಯಾಮಿಲಿ ಕುಳಿತು ನೋಡುವಂತಹ ಎಲ್ಲ ಮನರಂಜನಾತ್ಮಹ ಅಂಶಗಳೂ ಇದರಲ್ಲಿವೆ’ ಎಂದು ಕಥಾಹಂದರದ ಬಗ್ಗೆ ಮಾಹಿತಿ ನೀಡಿದರು.
“ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದ ಹಳ್ಳಿ ಹುಡುಗನಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಇಲ್ಲಿಯವರೆಗೆ ಮಾಡಿರದ ಪಾತ್ರ ಈ ಸಿನಿಮಾದಲ್ಲಿದೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು ನಾಯಕ ನಟ ಧರ್ಮ ಕೀರ್ತಿರಾಜ್. ನಾಯಕಿ ಕಾವ್ಯಾ, ನಿರ್ಮಾಪಕ ಎಸ್. ಜೆ. ಸುರೇಶ್ ಆರೋಕ್ಯ ರಾಜ್ “ಯುಕೆ ಲವ್ ಸ್ಟೋರಿ’ ಸಿನಿಮಾದ ಬಗ್ಗೆ ಮಾತನಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.