Birthday ಸಂಭ್ರಮದಲ್ಲಿ ಧ್ರುವ ಸರ್ಜಾ; ಮಾರ್ಟಿನ್, ಕೆಡಿ ಮೇಲೆ ಭರ್ಜರಿ ನಿರೀಕ್ಷೆ
Team Udayavani, Oct 6, 2023, 10:42 AM IST
ನಟ ಧ್ರುವ ಸರ್ಜಾ ಅಭಿಮಾನಿಗಳಿಗೆ ಖುಷಿಯ ದಿನ. ಅದಕ್ಕೆ ಕಾರಣ ಇಂದು ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಕಳೆದ ಮೂರು ವರ್ಷಗಳಿಂದ ಹುಟ್ಟುಹಬ್ಬ ಆಚರಿಸದ ಧ್ರುವ ಸರ್ಜಾ ಅವರ ಹುಟ್ಟುಹಬ್ಬವನ್ನು ಈ ಬಾರಿ ಅದ್ಧೂರಿಯಾಗಿ ಹಾಗೂ ಅಷ್ಟೇ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ಇದರ ನಡುವೆಯೇ ನಟ ಧ್ರುವ ಸರ್ಜಾ, ತಮ್ಮ ಅಭಿಮಾನಿಗಳಿಗಾಗಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ತಮ್ಮ ಹುಟ್ಟು ಹಬ್ಬಕ್ಕೆ ಬರುವವರು ಕೇಕ್, ಹಾರ, ತುರಾಯಿಗಳನ್ನು ತರಬಾರದು ಎಂದು ಕೋರಿಕೊಂಡಿರುವ ಧ್ರುವ ಸರ್ಜಾ, ಅಂದು ಅಭಿಮಾನಿಗಳು ಶಾಲಾ ಮಕ್ಕಳಿಗೆ ಬೇಕಾಗುವ ಪುಸ್ತಕ, ಬ್ಯಾಗ್, ಪೆನ್ನು ಹೀಗೆ ಅಗತ್ಯ ಸಾಮಗ್ರಿಗಳನ್ನು ಉಡುಗೊರೆ ರೂಪದಲ್ಲಿ ಕೊಡುವಂತೆ ಕೇಳಿಕೊಂಡಿದ್ದಾರೆ.
ಇನ್ನು, ಧ್ರುವ ಸಿನಿಮಾ ವಿಚಾರಕ್ಕೆ ಬರುವುದಾದರೆ “ಮಾರ್ಟಿನ್’ ಹಾಗು “ಕೆಡಿ’ ನಡೆಯುತ್ತಿದೆ. “ಮಾರ್ಟಿನ್’ ಬಿಡುಗಡೆ ಹಂತಕ್ಕೆ ಬಂದಿದ್ದು, ಡಿಸೆಂಬರ್‌ನಲ್ಲಿ ತೆರೆಕಾಣುವ ಸಾಧ್ಯತೆ ಇದೆ. ಇನ್ನು ಔಟ್ ಆ್ಯಂಡ್ ಔಟ್ ಆ್ಯಕ್ಷನ್-ಥ್ರಿಲ್ಲರ್ ಕಥಾಹಂದರ ಹೊಂದಿರುವ”ಮಾರ್ಟಿನ್’ ಸಿನಿಮಾದಲ್ಲಿ ನಾಯಕ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ಜೋಡಿಯಾಗಿದ್ದಾರೆ.
ಉದಯ್ ಕೆ. ಮೆಹ್ತಾ ನಿರ್ಮಾಣದಲ್ಲಿ “ಮಾರ್ಟಿನ್’ ಸಿನಿಮಾ ಮೂಡಿಬರುತ್ತಿದೆ. “ಅದ್ಧೂರಿ’ ಸಿನಿಮಾದ ಬಳಿಕ ಎರಡನೇ ಬಾರಿಗೆ ನಟ ಧ್ರುವ ಸರ್ಜಾ ಮತ್ತು ನಿರ್ದೇಶಕ ಎ. ಪಿ ಅರ್ಜುನ್ ಕಾಂಬಿನೇಶನ್‌ನಲ್ಲಿ “ಮಾರ್ಟಿನ್’ ಸಿನಿಮಾ ಮೂಡಿಬರುತ್ತಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ ಮತ್ತು ಮಲೆಯಾಳಂನಲ್ಲೂ “ಮಾರ್ಟಿನ್’ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಇತ್ತೀಚಿನ ವರ್ಷಗಳಲ್ಲಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸ್ಯಾಂಡಲ್‌ವುಡ್‌ನ ಚಿತ್ರಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಈಗ ಆ ಸಾಲಿಗೆ “ಮಾರ್ಟಿನ್’ ಕೂಡಾ ಸೇರುವ ನಿರೀಕ್ಷೆ ಇದೆ. ಈ ಚಿತ್ರವನ್ನು ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ತೆರೆಕಾಣುತ್ತಿದೆ. ಈ ಬಾರಿ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ತೆರೆಗೆ ತರಲು ಚಿತ್ರತಂಡ ರೆಡಿಯಾಗಿದೆ. ಈಗಾಗಲೇ ಬಿಟ್ಟಿರುವ ಸಿನಿಮಾದ ಫಸ್ಟ್‌ಲುಕ್‌ಗೆ ಪರಭಾಷೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ನಿರ್ದೇಶಕ ಎ.ಪಿ.ಅರ್ಜುನ್ ಹಾಗೂ ಧ್ರುವ ಮತ್ತೂಮ್ಮೆ ಜೊತೆಯಾಗುವ ಮೂಲಕ “ಮಾರ್ಟಿನ್’ ನಿರೀಕ್ಷೆ ಹೆಚ್ಚಿರುವುದು ಸುಳ್ಳಲ್ಲ.
𝐇𝐚𝐩𝐩𝐲 𝐁𝐢𝐫𝐭𝐡𝐝𝐚𝐲 #𝐌𝐚𝐫𝐭𝐢𝐧
𝐃𝐡𝐫𝐮𝐯𝐚 𝐒𝐚𝐫𝐣𝐚❤️𝐈𝐍𝐃𝐈𝐀’𝐒 𝐁𝐈𝐆𝐆𝐄𝐒𝐓 𝐀𝐂𝐓𝐈𝐎𝐍 𝐒𝐀𝐆𝐀, #𝐌𝐀𝐑𝐓𝐈𝐍 𝐒𝐭𝐫𝐢𝐤𝐢𝐧𝐠 𝐭𝐡𝐞 𝐒𝐢𝐥𝐯𝐞𝐫 𝐒𝐜𝐫𝐞𝐞𝐧𝐬 𝐒𝐡𝐨𝐫𝐭𝐥𝐲.#MartinTheMovie @DhruvaSarja @AP_Arjun_film @princekukm @I_am_Vaibhavi pic.twitter.com/GAE7gJHPux
— AP Arjun🇮🇳 (@AP_Arjun_film) October 6, 2023
ನಿರ್ದೇಶಕ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್‌ನಲ್ಲಿ ತಯಾರಾಗುತ್ತಿರುವ “ಕೆಡಿ’ ಸಿನಿಮಾ ಮೇಲೆಯೂ ಭರ್ಜರಿ ನಿರೀಕ್ಷೆ ಹುಟ್ಟಿದೆ. ಈಗಾಗಲೇ ಈ ಚಿತ್ರದ ಚಿತ್ರೀಕರಣ ಕೂಡಾ ಆರಂಭವಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.