ದರ್ಶನ್ ಅಪಘಾತದ ಬಗ್ಗೆ ಜಗ್ಗೇಶ್ ಏನಂದ್ರು ಗೊತ್ತಾ?
Team Udayavani, Sep 24, 2018, 1:12 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಪಘಾತವಾಗಿದೆ ಎಂಬ ಸುದ್ದಿ ಕೇಳಿ ನಾನು ದಿಗ್ಭ್ರಾಂತನಾದೆ ಎಂದು ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಹೌದು! ನವರಸನಾಯಕ ಜಗ್ಗೇಶ್ ತಮ್ಮ ಟ್ವೀಟರ್ ಖಾತೆಯಲ್ಲಿ, “ಕಲಾಬಂಧು ದರ್ಶನ್‍ಗೆ ಅಪಘಾತವಾದ ಸುದ್ದಿಕೇಳಿ ದಿಗ್ಭ್ರಾಂತನಾದೆ. ಕೋಟ್ಯಾಂತರ ಕನ್ನಡದ ಆತ್ಮಗಳು ಹಾಗೂ ಅಮ್ಮನ ಆಶೀರ್ವಾದ ದರ್ಶನ್ ಅವರನ್ನು ಕಾಪಾಡಿದೆ. ಕ್ಷೇಮವಾಗಿದ್ದಾರೆ ರಾಯರದಯೇ ಯಾರ ಕಣ್ಣು ತಾಕದೆ ಸುಖವಾಗಿ ಬಾಳಿ ಶುಭಹಾರೈಕೆ” ಎಂದು ಟ್ವೀಟ್ ಮಾಡಿದ್ದಾರೆ.
ಘಟನೆ ವಿವರ?: ಶನಿವಾರದಂದು ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ನಂತರ ಇಂದು ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್‍ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.