ಟ್ರೈಲರ್ ಮೆಚ್ಚಿದ ಅಭಿಮಾನಿಗಳಿಗೆ ಯಶ್ ಹೇಳಿದ್ದೇನು ಗೊತ್ತಾ?
Team Udayavani, Nov 11, 2018, 3:02 PM IST
ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಹವಾ ಎಬ್ಬಿಸುತ್ತಿದೆ. ಯಶ್ ಲುಕ್ ಹಾಗೂ ಡೈಲಾಗ್ಸ್ನ ಸ್ಯಾಂಪಲ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ ಬಾಲಿವುಡ್‍ನಿಂದ ಹಿಡಿದು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಂದ “ಕೆಜಿಎಫ್’ ಚಿತ್ರತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಈ ಹಿನ್ನೆಲೆಯಲ್ಲಿ ನಟ ಯಶ್ ವಿಡಿಯೋ ಮೂಲಕ ಎಲ್ಲಾ ಅಭಿಮಾನಿಗಳಿಗೆ ಹಾಗೂ ಶುಭಾಶಯ ತಿಳಿಸಿದವರಿಗೆ ಧನ್ಯವಾದ ತಿಳಿಸಿದ್ದಾರೆ.
ಹೌದು! ನಟ ಯಶ್ ಟ್ವಿಟ್ಟರ್ ನಲ್ಲಿ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ. ನನ್ನ “ಕೆಜಿಎಫ್’ ಟ್ರೈಲರ್ ನ ನೀವು ರಿಸೀವ್ ಮಾಡಿಕೊಂಡಿರುವುದಕ್ಕೆ ತುಂಬಾ ತುಂಬಾ ಖುಷಿಯಾಗಿದೆ. ಹೇಗೆ ನಮ್ಮ ಖುಷಿಯನ್ನು ವ್ಯಕ್ತಪಡಿಸಬೇಕು ಗೊತ್ತಾಗುತ್ತಿಲ್ಲ. ಎರಡು ವರ್ಷದಿಂದ ಕಷ್ಟಪಟ್ಟು ನಾವು ಏನು ಕೆಲಸ ಮಾಡಿದ್ದೇವೆ ಎಂದು ನಿಮಗೆ ತೋರಿಸಬೇಕು ಎಂದು ಕಾಯುತ್ತಿದ್ದೆವು. ಈಗ ಅದನ್ನು ಟ್ರೈಲರ್ ಮೂಲಕ ನಿಮಗೆ ತೋರಿಸಿದ್ದೇವೆ’ ಎಂದು ಹೇಳಿದ್ದಾರೆ. “ನೀವು ಟ್ರೈಲರ್ ಮೆಚ್ಚಿರುವ ರೀತಿ ನಮಗೆ ಸಾರ್ಥಕತೆಯ ಭಾವನೆಯಾಗುತ್ತಿದೆ. ಇನ್ನು ಹೆಚ್ಚು ಕೆಲಸ ಮಾಡುವ ಸ್ಫೂರ್ತಿ ಸಿಕ್ಕಿದೆ.
ಅಭಿಮಾನಿಗಳು ತುಂಬಾ ಚೆನ್ನಾಗಿ ಟ್ರೈಲರ್ ಬಿಡುಗಡೆಯನ್ನು ಆಚರಿಸಿದ್ದೀರಿ. ಅವರಿಗೆಲ್ಲಾ ಧನ್ಯವಾದಗಳು. ಎಲ್ಲ ಕಲಾವಿದರು ಮತ್ತು ನಿರ್ಮಾಪಕರು ಸಿನಿಮಾ ನೋಡಿ ಸಪೋರ್ಟ್ ಮಾಡಿ ಬೆನ್ನು ತಟ್ಟಿದ್ದೀರಿ. ನೀವು ಕೊಡುವ ಶಕ್ತಿ, ಭರವಸೆಯಿಂದ ನಾವು ಇನ್ನೂ ಚೆನ್ನಾಗಿ ಕೆಲಸ ಮಾಡುತ್ತೇವೆ’ ಎಂದು ಧನ್ಯವಾದಗಳನ್ನು ತಿಳಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲೇ ಅತೀ ದೊಡ್ಡ ಬಜೆಟ್ ಸಿನಿಮಾ ಆಗಿರುವ “ಕೆಜಿಎಫ್’, ಇದೇ ಡಿಸೆಂಬರ್ 21ರಂದು ಐದು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. 80ರ ದಶಕದ ಕಾಲಘಟ್ಟದ ಕಥೆಯಲ್ಲಿ ಪಾತ್ರಕ್ಕಾಗಿ ಒಂದೂವರೆ ವರ್ಷ ಗಡ್ಡ, ಕೂದಲು ಬಿಟ್ಟು ರಫ್ ಅಂಡ್ ಟಫ್ ಲುಕ್ನಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ.
ಅವರ ಅಭಿನಯ ಕೂಡ ಈ ಚಿತ್ರದಲ್ಲಿ ಸಖತ್ ಡಿಫರೆಂಟ್ ಆಗಿದೆ ಎನ್ನಲಾಗುತ್ತಿದೆ. ಇನ್ನು ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಭುವನ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಯಶ್ ಎದುರಿಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದು, ಖಳ ನಟನಾಗಿ ರವಿಶಂಕರ್ ಸಹೋದರ ಅಯ್ಯಪ್ಪ ಅಭಿನಯಸುತ್ತಿದ್ದಾರೆ. ಇನ್ನುಳಿದಂತೆ ಅನಂತ್ ನಾಗ್, ಮಾಳವಿಕಾ, ಟಿ.ಎಸ್.ನಾಗಾಭರಣ, ಬಿ,ಸುರೇಶ್, ನೀನಾಸಂ ಅಶ್ವಥ್, ಅಚ್ಯುತ್ ಕುಮಾರ್, ರಾಮ್, ಅವಿನಾಶ್, ಲಕ್ಕಿ, ಹರೀಶ್ ರಾಯ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.