ಬಿಡುಗಡೆಯತ್ತ ದಿಗಂತ್ ಅಭಿನಯದ ‘ಮಾರಿ ಗೋಲ್ಡ್’
Team Udayavani, Aug 10, 2021, 11:44 AM IST
ದಿಗಂತ್ ನಾಯಕರಾಗಿರುವ ಕ್ರೈಮ್ ಥ್ರಿಲ್ಲರ್ “ಮಾರಿಗೋಲ್ಡ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಹಿನ್ನೆಲೆ ಸಂಗೀತ ನಡೆಯುತ್ತಿದೆ. ಶೀಘ್ರದಲ್ಲೇ ಚಿತ್ರ ಸೆನ್ಸಾರ್ ಅಂಗಳಕ್ಕೆ ಹೋಗಲಿದ್ದು, ಸಿನಿಮಾದ ಬಿಡುಗಡೆಗೆ ಚಿತ್ರತಂಡ ಪ್ಲ್ರಾನ್ ಮಾಡಿಕೊಳ್ಳುತ್ತಿದೆ. ರಾಘವೇಂದ್ರ ಎಂ.ನಾಯಕ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಮಾರಿಗೋಲ್ಡ್ ಅಂದಾಕ್ಷಣ, ಅದೊಂದು ಅಂಡರ್‌ವರ್ಲ್ಡ್ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ, ಈ ಕುತೂಹಲಕ್ಕೆ ತೆರೆಮೇಲೆಯೇ ಉತ್ತರ ಸಿಗಲಿದೆ.
ಆರ್.ವಿ.ಕ್ರಿಯೇಷನ್ಸ್ ಮೂಲಕ ರಘುವರ್ಧನ್ ಫಿಲಂಸ್ ಬ್ಯಾನರ್‌ನಲ್ಲಿ ರಘುವರ್ಧನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಘುವರ್ಧನ್ ಅವರು ಮೂಲತಃ ನಿರ್ದೇಶಕರಾಗಿದ್ದು, ಈ ಹಿಂದೆ ತಿಮ್ಮರಾಯ, ಬದ್ರಿ, ಗುಣವಂತ, ಮಿಸ್ಟರ್ ಎಲ್.ಎಲ್.ಬಿ. ಮೊದಲಾದ ಚಿತ್ರಗಳನ್ನು ರಘುವರ್ಧನ್ ನಿರ್ದೇಶಿಸಿದ್ದಾರೆ.
ಇದನ್ನೂ ಓದಿ:5ಡಿಯಲ್ಲಿ ನಾನು ಡಿಫರೆಂಟ್ ಅದಿತಿ.. ಹೊಸ ಚಿತ್ರದ ಮೇಲೆ ಭರ್ಜರಿ ನಿರೀಕ್ಷೆ
ಈ ಚಿತ್ರಕ್ಕೆ ವೀರ್ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್ ಭಟ್, ಕವಿರಾಜ್ ಮತ್ತು ವಿಜಯ್ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.
ಅರ್ಜುನ್ ರಾಜ್ ಸಾಹಸ, ಕಲೈ ಅವರ ನೃತ್ಯ ನಿರ್ದೇಶನವಿದೆ. ಬೆಂಗಳೂರು, ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್ ಕುಮಾರ್, ಕಾಕ್ರೋಚ್ ಸುಧಿ, ಯಶ್ ಶೆಟ್ಟಿ, ವಜ್ರಾಂಗ್ ಶೆಟ್ಟಿ, ಬಲರಾಜ್ವಾಡಿ ಸೇàರಿದಂತೆ ಹಲವು ಕಲಾವಿದರು ನಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.