126 ನೇ ಚಿತ್ರದ ಸಿದ್ಧತೆ ಜೋರು : ಬೆಳ್ಳಂಬೆಳಗ್ಗೆ ಶಿವಣ್ಣನನ್ನು ಭೇಟಿಯಾದ ರಿಷಬ್
Team Udayavani, Aug 19, 2021, 3:42 PM IST
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರ 124 ನೇ ಸಿನಿಮಾ ‘ನೀ ಸಿಗುವವರೆಗು’ ಕಳೆದ ಎರಡು ದಿನಗಳ ಹಿಂದೆಯಷ್ಟೆ ಸೆಟ್ಟೇರಿತು. ಇದೀಗ ಅವರ ಮತ್ತೊಂದು ಚಿತ್ರದ ಕೆಲಸಗಳು ಶುರುವಾಗಿವೆ.
ಸನ್ ಆಫ್ ಬಂಗಾರದ ಮನುಷ್ಯ ಶಿವರಾಜ್ ಕುಮಾರ್ ಅವರು ಸಿಕ್ಕಾಪಟ್ಟೆ ಬ್ಯುಝಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿರುವ ಅವರ ಮುಂದೆ ಇನ್ನೂ ಹಲವು ಸಿನಿಮಾಗಳ ಸಾಲುಗಟ್ಟಿ ನಿಂತಿವೆ. ಸದ್ಯ ಅವರ 124 ಸಿನಿಮಾ ಶೂಟಿಂಗ್ ಪ್ರಾರಂಭವಾಗಿದ್ದು, ಇದರ ಗ್ಯಾಪ್ ನಡುವೆ ಅವರ 126 ಚಿತ್ರದ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ.
ಅಂದಹಾಗೆ ಶಿವಣ್ಣ 126 ಚಿತ್ರಕ್ಕೆ ರಿಷಬ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿರುವುದು ಸಿನಿ ಅಭಿಮಾನಿಗಳಿಗೆ ತಿಳಿದಿರುವ ವಿಚಾರ. ಇದೀಗ ಈ ಚಿತ್ರದ ಪ್ರೀ ಪ್ರೊಡಕ್ಷನ್ ವರ್ಕ್ ಶುರುವಾಗಿದೆ. ಇಂದು ಮುಂಜಾನೆ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿರುವ ರಿಷಬ್ ಶೆಟ್ಟಿ ಮಾತಕತೆ ನಡೆಸಿದ್ದಾರೆ. ಈ ವೇಳೆ ನಿರ್ಮಾಪಕ ಜಯಣ್ಣ ಅವರೂ ಹಾಜರಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, “ ಇಂದು ಬೆಳ್ಳಂಬೆಳಗ್ಗೆ ಶಿವಣ್ಣ ಅವರನ್ನು ಭೇಟಿ ಮಾಡುವ ಭಾಗ್ಯ ನನ್ನದಾಯ್ತು. ಹೊಸ ಹೆಜ್ಜೆಯೊಂದು ಇಡುವ ಬಗ್ಗೆ ಉತ್ಸುಕನಾಗಿದ್ದೇನೆ” ಎಂದಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಶಿವಣ್ಣ ಅವರನ್ನು ಭೇಟಿ ಮಾಡುವ ಭಾಗ್ಯ ನನ್ನದಾಯ್ತು. ಹೊಸ ಹೆಜ್ಜೆಯೊಂದು ಇಡುವ ಬಗ್ಗೆ ಉತ್ಸುಕನಾಗಿದ್ದೇನೆ. @NimmaShivanna @JayannaFilms #Shivanna126 pic.twitter.com/Um9XVu1CRt
— Rishab Shetty (@shetty_rishab) August 19, 2021
ಇನ್ನು ಇದೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ ಅವರ ಚಿತ್ರಕ್ಕೆ ರಿಷಬ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕತೆ ಕೇಳಿಯೇ ಇಷ್ಟವಾಗಿ ಜಯಣ್ಣ ಅವರು ಈ ಚಿತ್ರವನ್ನು ನಿರ್ಮಿಸಲು ಮುಂದೆ ಬಂದಿದ್ದಾರೆ. ಶಿವಣ್ಣ ಹುಟ್ಟುಹಬ್ಬದಂದು ಈ ಸಿನಿಮಾ ಘೋಷನೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bhairathi Ranagal; ಶಿವಣ್ಣ ಡ್ರೀಮ್ ಪ್ರಾಜೆಕ್ಟ್ ಭೈರತಿ ಮೈಲುಗಲ್!
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
MUST WATCH
ಹೊಸ ಸೇರ್ಪಡೆ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.