ಪುನೀತ್ ಫ್ಯಾನ್ಸ್ ಗೆ ಸಿಹಿ ಸುದ್ದಿ|ಹ್ಯಾಟ್ರಿಕ್ ಬಾರಿಸಲು ಸಿದ್ಧರಾದ ಅಪ್ಪು-ಆನಂದರಾಮ್
Team Udayavani, Sep 18, 2021, 7:38 PM IST
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಅವರು ಅಪ್ಪು ಜೊತೆ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ.
ಪುನೀತ್ ಹಾಗೂ ಆನಂದರಾಮ್ ಅವರ ಕಾಂಬಿನೇಷನ್‍ನಲ್ಲಿ ಸಿದ್ಧವಾದ ‘ರಾಜಕುಮಾರ’ ಚಿತ್ರಕ್ಕೆ ಅಮೋಘ ಯಶಸ್ಸು ದೊರೆಯಿತು. ಸಿನಿ ಅಭಿಮಾನಿಗಳ ಹೃದಯ ಗೆಲ್ಲುವುದರ ಜೊತೆಗೆ ಗಲ್ಲಾಪೆಟ್ಟಿಗೆಯನ್ನೂ ತುಂಬಿಸಿ ಬ್ಲಾಕ್ ಬಸ್ಟರ್ ಸಿನಿಮಾಗಳ ಸಾಲಿಗೆ ಸೇರಿತು. ರಾಜಕುಮಾರ ನಂತರ ಎರಡನೇ ಬಾರಿಗೆ ಒಂದಾದ ಈ ತಾರಾ ಜೋಡಿ ‘ಯುವರತ್ನ’ ಹೆಸರಿನ ಅದ್ಭುತ ಸಿನಿಮಾ ನೀಡಿತು. ಕೋವಿಡ್ ಭೀತಿಯ ನಡುವೆಯೂ ತೆರೆ ಕಂಡ ಈ ಚಿತ್ರ ವಿಜಯದ ನಗೆ ಬೀರಿತು.
ಯುವರತ್ನದ ಬಳಿಕ ಆನಂದರಾಮ್ ಅವರ ಮುಂದಿನ ಸಿನಿಮಾದ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಅವರ ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೀಗ ಉತ್ತರ ನೀಡಿರುವ ಆನಂದರಾಮ್, ಮೂರನೇ ಬಾರಿ ಪುನೀತ್ ಜೊತೆ ಕೈ ಜೋಡಿಸಿದ್ದಾರೆ. ಇಂದು ಸಂಜೆ ತಮ್ಮ ಹೊಸ ಸಿನಿಮಾದ ಬಗ್ಗೆ ಮಾಹಿತಿ ನೀಡಿರುವ ಅವರು, ತಮ್ಮ ಹಾಗೂ ಅಪ್ಪು ಅವರ ಹೊಸ ಸಿನಿಮಾ ಮುಂದಿನ ವರ್ಷ ಸೆಟ್ಟೇರಲಿದೆ ಎಂದು ತಿಳಿಸಿದ್ದಾರೆ.
To All the Fans & Audience who are continuously asking About my film with Power star @PuneethRajkumar sir in association with @hombalefilms will start by Early Next year?Thanks for the love❤️ “ನಿಮ್ಮ ಅಭಿಮಾನ ನಮಗೆ ಶ್ರೀರಕ್ಷೆ” pic.twitter.com/8J1ic0SgdT
— Santhosh Ananddram (@SanthoshAnand15) September 18, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.