ದೇಸಾಯಿ “ಉದ್ಘರ್ಷ’: ಚಿತ್ರೀಕರಣ ಪೂರ್ಣ

Team Udayavani, Jan 7, 2019, 7:36 AM IST

udhgarsha.jpg

ಕನ್ನಡ ಚಿತ್ರರಂಗದಲ್ಲಿ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಸುನೀಲ್‌ಕುಮಾರ್‌ ದೇಸಾಯಿ. ಈಗಾಗಲೇ “ತರ್ಕ’, “ಉತ್ಕರ್ಷ’, “ನಿಷ್ಕರ್ಷ’, “ಸಂಘರ್ಷ’, “ಮರ್ಮ’ ಮತ್ತು “ಕ್ಷಣ ಕ್ಷಣ’ ಸೇರಿದಂತೆ ಅನೇಕ ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರಗಳನ್ನು ಕೊಟ್ಟಿರುವ ಸುನೀಲ್ ಕುಮಾರ್‌ ದೇಸಾಯಿ, ಇದೀಗ “ಉದ್ಘರ್ಷ’ದೊಂದಿಗೆ ಕಮ್ ಬ್ಯಾಕ್ ಆಗಿದ್ದು, ಚಿತ್ರದ ಚಿತ್ರೀಕರಣ ಮುಗಿದಿದೆ.

ಈಗಾಗಲೇ ಚಿತ್ರದ ಎಡಿಟಿಂಗ್ ಕೂಡ ಮುಗಿಸಿರುವ ನಿರ್ದೇಶಕ ದೇಸಾಯಿ ಅವರು, ಸದ್ಯ ಕುಂಬಳಕಾಯಿ ಒಡೆದಿದ್ದಾರೆ. “ಉದ್ಘರ್ಷ’ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ಅದೇ ಹೆಸರಿನಿಂದ ತೆರೆಕಾಣಲಿದ್ದು, ತಮಿಳಿನಲ್ಲಿ “ಉಚ್ಚಕಟ್ಟಮ್’ ಎಂದು ಹೆಸರಿಡಲಾಗಿದೆ. ಚಿತ್ರದ ಬಹುತೇಕ ಚಿತ್ರೀಕರಣ ಮಡಿಕೇರಿಯಲ್ಲಿ ನಡೆದಿದ್ದು, ಬೆಂಗಳೂರು, ಹೈದರಾಬಾದ್ ಹಾಗೂ ಕೇರಳದಲ್ಲೂ ಕೆಲ ದೃಶ್ಯಗಳ ಚಿತ್ರೀಕರಣವಾಗಿದೆ. 

ಚಿತ್ರದಲ್ಲಿ “ಸಿಂಗಂ 3′ ಖ್ಯಾತಿಯ ಠಾಕೂರ್ ಅನೂಪ್​ ಸಿಂಗ್ ನಾಯಕ ನಟರಾಗಿ ನಟಿಸಿದ್ದು, ತಮಿಳಿನ “ಕಬಾಲಿ’ ಖ್ಯಾತಿಯ ಧನ್ಸಿಕಾ ಹಾಗೂ ನವ ನಟಿ ತಾನ್ಯಾ ಹೋಪ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅಲ್ಲದೇ ಬಾಲಿವುಡ್​​ ವಿಲನ್ ಕಬೀರ್ ಸಿಂಗ್ ದುಹಾನ್, ತೆಲುಗಿನ “ಬಾಹುಬಲಿ’ ಖ್ಯಾತಿಯ ಪ್ರಭಾಕರ್, ಶ್ರವಣ್ ರಾಘವೇಂದ್ರ, ವಂಶಿ ಕೃಷ್ಣ, ಶ್ರದ್ಧಾ ದಾಸ್ ಮುಂತಾದವರು ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಮುಖ್ಯವಾಗಿ ಬಹುಭಾಷಾ ನಟ ಕನ್ನಡಿಗ ಕಿಶೋರ್ ಚಿತ್ರದಲ್ಲಿ ವಿಶಿಷ್ಟ ಪಾತ್ರದಲ್ಲಿ ನಟಿಸಿದ್ದರೆ, ಹರ್ಷಿಕಾ ಪೂಣಚ್ಚ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ಡಿ. ಕ್ರಿಯೇಶನ್ಸ್​ ಬ್ಯಾನರ್​ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ದೇವರಾಜ್ ನಿರ್ಮಾಪಕರು. ಇವರೊಂದಿಗೆ ಅವರ ಗೆಳೆಯರಾದ ಮಂಜುನಾಥ್‌, ತಿರುಮಲೈ, ರಾಜೇಂದ್ರ ಕುಮಾರ್‌ ಸಹ ನಿರ್ಮಾಪಕರರಾಗಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಹಿಂದಿಯ ಖ್ಯಾತ ಮ್ಯೂಸಿಕ್​ ಡೈರೆಕ್ಟರ್ ಸಂಜೋಯ್ ಚೌಧರಿ ಸಂಗೀತ ಸಂಯೋಜಿಸಿದ್ದಾರೆ. ಪಿ.ರಾಜನ್ ಹಾಗೂ ದಿವಂಗತ ವಿಷ್ಣುವರ್ಧನ್ ಅವರ ಕ್ಯಾಮರಾ ಕೈಚಳಕ, ಕೆಂಪರಾಜು ಸಂಕಲನ, ರವಿವರ್ಮ ಸಾಹಸವಿದೆ. ಇನ್ನು ನಿರ್ದೇಶನದ ಜೊತೆಗೆ ದೇಸಾಯಿಯವರೇ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ರಚಿಸಿದ್ದು, ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ.

ಟಾಪ್ ನ್ಯೂಸ್

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.