“ಅತಿರಥ’ ಚಿತ್ರ ಪ್ರದರ್ಶನಕ್ಕೆ ಹಿಂದೂ ಸಂಘಟನೆಗಳ ಅಡ್ಡಿ
Team Udayavani, Nov 26, 2017, 5:01 PM IST
“ಆ ದಿನಗಳು’ ಚೇತನ್ ನಟಿಸಿರುವ “ಅತಿರಥ’ ಚಿತ್ರಕ್ಕೆ ಈಗ ಧರ್ಮ ವಿವಾದ ಅಂಟಿಕೊಂಡಿದೆ. ಅದು ಹಿಂದೂ ಧರ್ಮ. ಹೌದು, ಚೇತನ್ ನಟಿಸಿರುವ “ಅತಿರಥ’ ಚಿತ್ರ ಶುಕ್ರವಾರ ತೆರೆಕಂಡಿದೆ. ಈಗ ಆ ಚಿತ್ರವನ್ನು ಪ್ರದರ್ಶನ ಮಾಡಬಾರದೆಂದು ಕೆಲ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಅದಕ್ಕೆ ಕಾರಣ ಚೇತನ್ ಹಿಂದೂ ವಿರೋಧಿ ಎಂಬುದು ಸಂಘಟನೆಗಳು ಕೊಡುತ್ತಿರುವ ಕಾರಣ.
ನಟ ಚೇತನ್ ಹಿಂದೂ ವಿರೋಧಿಯಾಗಿದ್ದು, ಹಿಂದೂ ಧರ್ಮದ, ಸ್ವಾಮೀಜಿಗಳ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಹಾಗಾಗಿ, ಅವರ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ತಮ್ಮ ಸಿನಿಮಾಕ್ಕೆ ಧರ್ಮ ತಳುಕು ಹಾಕಿಕೊಂಡು ಸಿನಿಮಾಕ್ಕೆ ಧಕ್ಕೆ ತರುವ ಹಾಗೂ ತಮ್ಮನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಬಗ್ಗೆ ಚೇತನ್ ಮಾತನಾಡಿದ್ದಾರೆ.
“ನಾನು ಹಿಂದೂ ಧರ್ಮದ ವಿರೋಧಿಯಲ್ಲ. ಹಿಂದೂ ಧರ್ಮದ ಬಹುಮುಖ್ಯತೆಯ ಬಗ್ಗೆ ನನಗೆ ಅಪಾರ ಗೌರವವಿದೆ. ಶಾಲಾ ದಿನಗಳಲ್ಲಿ ರಾಮಾಯಣ, ಮಹಾಭಾರತ ಪಾತ್ರಗಳ ಬಗ್ಗೆ ತಿಳಿದುಕೊಂಡು ಅದನ್ನು ಏಕಪಾತ್ರ ಅಭಿನಯ ಮಾಡಿ ತೋರಿಸಿದ್ದೇವೆ. ಹಿಂದೂ ಧರ್ಮದ ವೈವಿಧ್ಯತೆ, ಸಾಮರಸ್ಯ ನನಗೆ ಇಷ್ಟ. ಆದರೆ, ಹಿಂದುತ್ವದ ಹೆಸರಿನಲ್ಲಿ ನಡೆಸುತ್ತಿರುವ ಹಿಂಸೆಯ, ದಬ್ಟಾಳಿಕೆಯ ವಿರೋಧಿ ನಾನು.
ಅದು ಕೇವಲ ಹಿಂದೂ ಧರ್ಮವಲ್ಲ, ಇಸ್ಲಾಂ ಆಗಲೀ ಯಾವುದೇ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸೆಯನ್ನು ನಾನು ವಿರೋಧಿಸುತ್ತೇನೆ. ಇದು ಸಂವಿಧಾನ ವಿರೋಧಿ ಚಟುವಟಿಕೆ. ಹಿಂಸೆ ಭಾರತದ ಕಲ್ಪನೆಗೆ ವಿರುದ್ಧವಾದುದು. ನಾನು ಹಿಂಸೆಯನ್ನು ವಿರೋಧಿಸುತ್ತಲೇ ಬಂದವನು. ಸಮಾನತೆ, ಸೌಹಾರ್ದತೆಯ ಕನಸು ಕಂಡವನು. ಇತ್ತೀಚೆಗೆ ಚಾಮರಾಜ ನಗರದಲ್ಲಿ ಕೆಲ ಸಂಘಟನೆ ಸಿನಿಮಾದ ಪ್ರದರ್ಶನಕ್ಕೆ ಅಡ್ಡಿಪಡಿಸಿದೆ.
ಹಿಂದುತ್ವದ ಹೆಸರಿನಲ್ಲಿ ಗೂಂಡಾಗಿರಿ ಮಾಡಲು ಹೊರಟಿದೆ. ನನ್ನ ವಿಚಾರಧಾರೆಗಳ ಬಗ್ಗೆ ಸಮಸ್ಯೆ ಇದ್ದರೆ ಆ ಬಗ್ಗೆ ಚರ್ಚೆ ಮಾಡುವ ಅವಕಾಶ ಈ ಸಂವಿಧಾನದಲ್ಲಿ ಇದೆ. ಅದು ಬಿಟ್ಟು ಓಡ್ತಾ ಇರೋ ಸಿನಿಮಾಕ್ಕೆ ಅಡ್ಡಿಪಡಿಸಿ ನಿರ್ಮಾಪಕರಿಗೆ ತೊಂದರೆ ಕೊಡೋದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ. ಆ ಸಂಘಟನೆಗೆ ಸಂಬಂಧಿಸಿದ ಪಕ್ಷ ಕೂಡಾ ಆ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮುಂದೇನು ಮಾಡಬೇಕೆಂದು ಚರ್ಚಿಸುತ್ತೇವೆ’ ಎನ್ನುತ್ತಾರೆ ಚೇತನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.