ಸಿನಿಮಾ ಪ್ರದರ್ಶನಕ್ಕೆ ತಡೆ ಬೇಡ: ಮಾತುಕತೆಯ ಮೂಲಕ ಬಗೆಹರಿಸೋಣ
Team Udayavani, Jan 1, 2018, 11:25 AM IST
ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುತ್ತಿರುವ ಯಾವುದೇ ಸಿನಿಮಾಗಳಿಗೆ ತಡೆ ತರಬೇಡಿ, ಏನಾದರೂ ಸಮಸ್ಯೆ ಇದ್ದರೆ ಅದನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ. ಯಾವುದಾದರೂ ಚಿತ್ರದಲ್ಲಿ ಲೋಪವಿದೆ ಎಂದು ಯಾರಾದರೂ ನ್ಯಾಯಾಲಯದ ಮೆಟ್ಟಿಲೇರಿದರೆ, ಪರಿಣತರ ಸಮಿತಿ ಆ ಚಿತ್ರ ವೀಕ್ಷಿಸಿ ನಂತರ ಮುಂದಿನ ಕ್ರಮ ಕೈಗೊಳ್ಳುವಂತಹ ವ್ಯವಸ್ಥೆಯನ್ನು ಮಾಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ನ್ಯಾಯಾಲಯ ಹಾಗೂ ವಕೀಲರ ಸಂಘವನ್ನು ಮನವಿ ಮಾಡಿದ್ದಾರೆ.
ವಕೀಲರಿಗೆ ಅವಮಾನವಾಗುವಂತಹ ಸಂಭಾಷಣೆ ಇದೆ ಎಂದು ವಕೀಲರೊಬ್ಬರು “ಅಂಜನಿಪುತ್ರ’ ಚಿತ್ರಕ್ಕೆ ತಡೆ ತಂದು, ಚಿತ್ರ ಪ್ರದರ್ಶನ ಒಂದು ದಿನದ ಮಟ್ಟಿಗೆ ರದ್ದಾಗಿತ್ತು. ಈಗ ಮತ್ತೆ ಎಂದಿನಂತೆ ಚಿತ್ರ ಪ್ರದರ್ಶನ ಪ್ರಾರಂಭವಾಗಿದೆ. ಈ ಕುರಿತಾಗಿ ಮಾತನಾಡಿದ ಸಾ.ರಾ.ಗೋವಿಂದು, ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಸಿನಿಮಾಕ್ಕೆ ತಡೆ ತಂದರೆ ಆ ಚಿತ್ರದ ನಿರ್ಮಾಪಕನಿಗೆ ಸಾಕಷ್ಟು ನಷ್ಟವಾಗುತ್ತದೆ. ಅದರ ಬದಲು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು.
ವಾಣಿಜ್ಯ ಮಂಡಳಿ ಯಾವುದೇ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸಲು ಸಿದ್ಧ. ನಾನು ವಕೀಲರ ಸಂಘ ಹಾಗೂ ನ್ಯಾಯಾಲಯದಲ್ಲಿ ಮನವಿ ಮಾಡುತ್ತೇನೆ, ಯಾವುದೇ ಸಿನಿಮಾಕ್ಕೂ ತಡೆ ತರುವ ಮೊದಲು ಚಿತ್ರವನ್ನು ಎಕ್ಸಪರ್ಟ್ ಸಮಿತಿ ನೋಡಲಿ. ಆ ನಂತರ ಮುಂದಿನ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ. ಈ ಕುರಿತು ಮುಂದಿನ ದಿನಗಳಲ್ಲಿ ವಕೀಲರ ಸಂಘಕ್ಕೆ ಮಂಡಳಿಯಿಂದ ಪತ್ರ ಮುಖೇನ ಮನವಿ ಕೂಡಾ ಮಾಡುತ್ತೇನೆ.
ನಮಗೆ ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ. ಆದರೆ, “ಅಂಜನಿಪುತ್ರ’ದಲ್ಲಿನ ಸಂಭಾಷಣೆಯನ್ನು ಕಟ್ ಮಾಡಿ, ಮತ್ತೆ ಸೆನ್ಸಾರ್ ಮಾಡಿಸುವಲ್ಲಿ ತಡವಾಗಿದೆಯೇ ಹೊರತು, ಯಾರು ಕೂಡಾ ನ್ಯಾಯಾಲಯದ ಆಜ್ಞೆಯನ್ನು ಧಿಕ್ಕರಿಸಿಲ್ಲ. ಮುಂದಿನ ದಿನಗಳಲ್ಲಿ ಸಿನಿಮಾಗಳ ಕಾನೂನು ತೊಡಕನ್ನು ಆದಷ್ಟು ಮಾತುಕತೆಯ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.