ಡಾಲಿ ಧನಂಜಯ್ ಭೈರವ ಅವತಾರ
Team Udayavani, Sep 3, 2018, 11:23 AM IST
ಧನಂಜಯ್ ಖುಷಿಯಾಗಿದ್ದಾರೆ. ಮತ್ತೂಮ್ಮೆ ಅವರ ನಟನೆಗೆ, ಗೆಟಪ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. “ಟಗರು’ ಚಿತ್ರದ ಡಾಲಿ ಪಾತ್ರದ ಮೂಲಕ ಹವಾ ಎಬ್ಬಿಸಿದ ಧನಂಜಯ್‌ಗೆ ಆ ಚಿತ್ರದಿಂದ ದೊಡ್ಡ ಬ್ರೇಕ್ ಸಿಕ್ಕಿದ್ದು ಸುಳ್ಳಲ್ಲ. ಅದರ ಬೆನ್ನಲ್ಲೇ ಧನಂಜಯ್ ಒಪ್ಪಿಕೊಂಡ ಸಿನಿಮಾ “ಭೈರವ ಗೀತಾ’. ರಾಮ್‌ಗೋಪಾಲ್ ವರ್ಮಾ ಅವರ ಶಿಷ್ಯ ಸಿದ್ಧಾರ್ಥ್ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುತ್ತಿದೆ.
ಕನ್ನಡ ಹಾಗೂ ತೆಲುಗಿನಲ್ಲಿ ತಯಾರಾಗುತ್ತಿರುವ ಈ ಚಿತ್ರ ಫಸ್ಟ್‌ಲುಕ್‌ನಲ್ಲೇ ಸದ್ದು ಮಾಡಿತ್ತು. ಈಗ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಟ್ರೇಲರ್ ಬಿಡುಗಡೆಯಾಗಿದ್ದು, ಕನ್ನಡ ವರ್ಶನ್ ಅನ್ನು ಶಿವರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಚಿತ್ರದಲ್ಲಿ ಧನಂಜಯ್ ಮತ್ತೂಮ್ಮೆ ರಗಡ್ ಆಗಿ ಕಾಣಿಸಿಕೊಂಡಿದ್ದು, ಟ್ರೇಲರ್ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
“ಟ್ರೇಲರ್‌ಗೆ ಎರಡೂ ರಾಜ್ಯಗಳಲ್ಲೂ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಮ್‌ಗೋಪಾಲ್ ವರ್ಮಾ ಅವರು ಅನೇಕ ಬಾರಿ ಕರೆಮಾಡಿ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಯನ್ನು ಹಂಚಿಕೊಂಡು ಖುಷಿಯಾದರು. ಇಲ್ಲಿ ಶಿವರಾಜಕುಮಾರ್, ದರ್ಶನ್ ಕೂಡಾ ಟ್ರೇಲರ್‌ಗೆ ಮೆಚ್ಚುಗೆ ಸೂಚಿಸಿದ್ದಾರೆ. ತುಂಬಾ ಯಂಗ್ ಟೀಂ ಸೇರಿಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ.
ಕಥೆ, ನಿರೂಪಣೆ ಎಲ್ಲವೂ ಹೊಸದಾಗಿದೆ’ ಎಂದು ಚಿತ್ರದ ಬಗ್ಗೆ ಮಾತನಾಡುತ್ತಾರೆ ಧನಂಜಯ್. ಈ ಚಿತ್ರ ರಾಶಿ ಕಂಬೈನ್ಸ್ ಹಾಗೂ ಕಂಪೆನಿ ಪ್ರೊಡಕ್ಷನ್ಸ್‌ನಡಿ ನಿರ್ಮಾಣವಾಗಿದೆ. ಹೆಸರಿಗೆ ತಕ್ಕಂತೆ ಇದೊಂದು ಔಟ್ ಅಂಡ್ ಔಟ್ ಲವ್‌ಸ್ಟೋರಿಯಾಗಿದ್ದು, ಪ್ರೀತಿಗಾಗಿ ಕ್ರೈಮ್‌ನತ್ತ ವಾಲುವ ಪ್ರೇಮಿಯೊಬ್ಬನ ಕಥೆಯನ್ನು ಹೊಂದಿದೆ. ಈ ನಡುವೆಯೇ ಸೂರಿ ನಿರ್ದೇಶನದ “ಪಾಪ್‌ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲೂ ಧನಂಜಯ್ ನಾಯಕರಾಗಿ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.