Doora Teera Yana Movie: ದೂರ ತೀರದಲ್ಲಿ ಪ್ರೇಮ ಪುರಾಣ
Team Udayavani, Aug 21, 2024, 11:07 AM IST
ನಿರ್ದೇಶಕ ಮಂಸೋರೆ ಅವರ ಹೊಸ ಸಿನಿಮಾದ ಟೈಟಲ್ ಬಿಡುಗಡೆಯಾಗಿದೆ. ಚಿತ್ರಕ್ಕೆ “ದೂರ ತೀರ ಯಾನ’ ಎಂಬ ಶೀರ್ಷಿಕೆ ಇಡಲಾಗಿದ್ದು, ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಅನಾವರಣಗೊಳಿಸಲಾಯಿತು.
ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮಂಸೋರೆ, “ನನ್ನ ಹಿಂದಿನ ಚಿತ್ರಗಳನ್ನು ನೀವು ನೋಡಿದ್ದೀರಾ. ಅದನ್ನು ಮೀರಿಸುವ ಪ್ರಯತ್ನ ದೂರ ತೀರ ಯಾನ. ಈಗ ಪ್ರೇಕ್ಷಕರ ಅಭಿರುಚಿ ಬದಲಾಗಿದೆ. ಅವರ ನಿರೀಕ್ಷೆಗಳು ಸಾಕಷ್ಟಿದೆ. ಹೀಗೆ ನಾವು ಬದಲಾದ ಪರಿಸ್ಥಿತಿಗೆ ಹೊಂದಿಕೊಂಡು, ಅವರಿಗೆ ಬೇಕಾದ ರೀತಿಯ ಸಿನಿಮಾ ಮಾಡಬೇಕು. ಆ ನಿಟ್ಟಿನಲ್ಲಿ ಈಗ ನಾನು ಮಾಡಲು ಹೊರಟಿರುವ ಸಿನಿಮಾ ದೂರ ತೀರ ಯಾನ. ಇದೊಂದು ದಾರಿಯಲ್ಲಿ ಸಾಗುತ್ತಾ ನಡೆಯುವ ಪ್ರೇಮಕಥೆ. ಚಿತ್ರದ ಮೊದಲ ಹತ್ತು ನಿಮಿಷ ಮಾತ್ರ ಬೆಂಗಳೂರಿನಲ್ಲಿ ನಡೆಯುತ್ತದೆ. ಉಳಿದೆಲ್ಲಾ ದಾರಿಯಲ್ಲಿ ಸಾಗುತ್ತದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟ ಹುಡುಗ – ಹುಡುಗಿ ಹೊಸ ರೀತಿಯ ಪ್ರೀತಿಯನ್ನು ಕಂಡುಕೊಳ್ಳುವ ಕಥೆಯೂ ಹೌದು. ವಿಜಯ್ ಕೃಷ್ಣ ನಾಯಕನಾಗಿ, ರುದ್ರ ಗರುಡ ಪುರಾಣ ಚಿತ್ರದ ಖ್ಯಾತಿಯ ಪ್ರಿಯಾಂಕ ಕುಮಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ’ ಎಂದರು.
ತುಂಬಾ ದಿನಗಳಿಂದ ಒಳ್ಳೆಯ ಪಾತ್ರಕ್ಕಾಗಿ ಕಾಯುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ಗೆಳೆಯ ಮಂಸೋರೆ ಒಂದೊಳ್ಳೆ ಕಥೆ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕ ವಿಜಯಕೃಷ್ಣ. ನಾಯಕಿ ಪ್ರಿಯಾಂಕಾ ಕೂಡಾ ಪಾತ್ರದ ಬಗ್ಗೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.