ಡಾ. ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ “ರಾಜಾ ಸಿಂಹ’ ಟೀಸರ್
Team Udayavani, Sep 16, 2017, 6:25 PM IST
ಅನಿರುದ್ಧ್ ಅಭಿನಯದ “ರಾಜಾ ಸಿಂಹ’ ಚಿತ್ರದ ಟೀಸರ್ ಇಷ್ಟರಲ್ಲಾಗಲೇ ಬಿಡುಗಡೆಯಾಗಬೇಕಿತ್ತು. ಕಾರಣಾಂತರಗಳಿಂದ ಸ್ವಲ್ಪ ತಡವಾಗಿ, ಇದೀಗ ಸೆಪ್ಟೆಂಬರ್ 18ರಂದು ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.
ಅಂದು ಮಧ್ಯಾಹ್ನ 12 ಗಂಟೆಗೆ ಡಾ. ವಿಷ್ಣುವರ್ಧನ್ ಅವರ ಜಯನಗರದ ಮನೆಯಲ್ಲಿ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಈ ಸಂದರ್ಭದಲ್ಲಿ ಡಾ. ಭಾರತಿ ವಿಷ್ಣುವರ್ಧನ್ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಹಾಜರಿರಲಿದ್ದಾರೆ.
ಅಂದಹಾಗೆ, “ರಾಜ ಸಿಂಹ’ ಚಿತ್ರವನ್ನು ಸಿ.ಡಿ. ಬಸಪ್ಪ ನಿರ್ಮಿಸುತ್ತಿದ್ದು, ರವಿರಾಮ್ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅನಿರುದ್ಧ್ ಎದುರು ನಿಖೀತಾ ನಾಯಕಿಯಾಗಿ ನಟಿಸಿದ್ದು, ಭಾರತಿ ವಿಷ್ಣುವರ್ಧನ್, ಅಂಬರೀಶ್, ಶರತ್ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ.
ಈ ಚಿತ್ರವು “ಸಿಂಹಾದ್ರಿಯ ಸಿಂಹ’ ಚಿತ್ರದ ಮುಂದುವರೆದ ಭಾಗವಾಗಿದ್ದು, ಇದರಲ್ಲಿ ವಿಷ್ಣುವರ್ಧನ್ ಅವರ ಪಾತ್ರವೂ ಇರುತ್ತದಂತೆ. “ಸಿಂಹಾದ್ರಿಯ ಸಿಂಹ’ ಚಿತ್ರದಲ್ಲಿನ ವಿಷ್ಣುವರ್ಧನ್ ಅವರ ಸ್ಟಾಕ್ ಶಾಟ್‌ಗಳನ್ನು ಬಳಸಿಕೊಳ್ಳುವದರ ಜೊತೆಗೆ, ಗ್ರಾಫಿಕ್ಸ್ ಮೂಲಕ ಅವರನ್ನು ಮತ್ತೂಮ್ಮೆ ಸೃಷ್ಠಿಸಲಾಗುತ್ತಿರುವುದು ಈ ಚಿತ್ರದ ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.