ಷರತ್ತುಬದ್ಧ ಬೇಲ್ ಮಂಜೂರು;ದುನಿಯಾ ವಿಜಿಗೆ ಜಡ್ಜ್ ಹೇಳಿದ ಕಿವಿಮಾತೇನು?
Team Udayavani, Oct 1, 2018, 3:53 PM IST
ಬೆಂಗಳೂರು: ಜಿಮ್ ತರಬೇತುದಾರ ಮಾರುತಿ ಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಕೊನೆಗೂ ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಒಂದು ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಒಡ್ಡಬಾರದು, ಸಾಕ್ಷ್ಯ ನಾಶಮಾಡಬಾರದು ಎಂಬ ಷರತ್ತು ವಿಧಿಸಿ ನ್ಯಾಯಾಧೀಶರಾದ ಟಿಪಿ ರಾಮಲಿಂಗೇಗೌಡರು ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದರು.
ಮಾಧ್ಯಮಗಳಿವೆ ಎಚ್ಚರಿಕೆಯಿಂದ ವರ್ತಿಸಲಿ. ಹೀರೋ ಬೇರೆಯವರಿಗೆ ರೋಲ್ ಮಾಡೆಲ್ ಆಗಿರಬೇಕು. ನಟ ವಿಜಯ್ ಹೀಗೆಲ್ಲಾ ಮಾಡುವುದು ಸರಿಯಲ್ಲ. ಸಲೆಬ್ರೆಟಿಗಳು ಹೇಗೆಂದರೆ ಹಾಗೆ ವರ್ತಿಸುವುದಲ್ಲ. ಜಾಮೀನು ನೀಡಿದ್ದೇನೆ, ಮುಂದೆ ಹೀಗೆ ವರ್ತಿಸಬಾರದು ಎಂದು ದುನಿಯಾ ವಿಜಯ್ ಪರ ವಕೀಲರಿಗೆ ನ್ಯಾಯಾಧೀಶರು ಮೌಖಿಕವಾಗಿ ಕಿವಿಮಾತು ಹೇಳಿದ ಪ್ರಸಂಗ ನಡೆಯಿತು.
ಹಲ್ಲೆ ಮತ್ತು ಕಿಡ್ನಾಪ್ ಪ್ರಕರಣದ ಸಂಬಂಧ ಜಾಮೀನು ಕೋರಿ ವಿಜಯ್ ಸೇರಿದಂತೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು 8ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು.
ಸೆ.27ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್ ವಿಚಾರಣೆ ಮುಂದೂಡಿತ್ತು. ಶನಿವಾರ ವಾದ, ಪ್ರತಿವಾದ ಆಲಿಸಿದ ಬಳಿಕ ಸೆಷನ್ಸ್ ಕೋರ್ಟ್ ನ್ಯಾಯಾಧೀಶರು ಜಾಮೀನು ತೀರ್ಪನ್ನು ಅ.1ಕ್ಕೆ ಕಾಯ್ದಿರಿಸಿದ್ದರು.
ಇಂದೇ ಜೈಲಿನಿಂದ ಬಿಡುಗಡೆಗೆ ಹರಸಾಹಸ?
ಜೈಲಿನಲ್ಲಿ ಜೈಲು ನಿಯಮದ ಪ್ರಕಾರ ಟಿವಿ ವೀಕ್ಷಿಸುತ್ತಿದ್ದ ದುನಿಯಾ ವಿಜಿ ಜಾಮೀನು ಮಂಜೂರು ಆದೇಶದ ಸುದ್ದಿ ಹೊರಬೀಳುತ್ತಿದ್ದಂತೆಯೇ ಮುಖದಲ್ಲಿ ಮಂದಹಾಸ ಮೂಡಿತ್ತು. ವಿಜಿ ಪರ ವಕೀಲರು ಸೆಷನ್ಸ್ ಕೋರ್ಟ್ ಜಾಮೀನು ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಸಂಜೆ 6.30ರೊಳಗೆ ಜೈಲಿನಲ್ಲಿ ಬಿಡುಗಡೆ ಪ್ರಕ್ರಿಯೆ ಮುಗಿಯಬೇಕಾಗಿದೆ. ಇಲ್ಲದಿದ್ದಲ್ಲಿ ಮಂಗಳವಾರ ಸರ್ಕಾರಿ ರಜೆ. ಹೀಗಾಗಿ ವಿಜಿ ಬಿಡುಗಡೆಗಾಗಿ ಬುಧವಾರದವರೆಗೆ ಕಾಯಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.