Kannada Movie: ಎಸ್.ನಾರಾಯಣ್ ಚಿತ್ರದಲ್ಲಿ ದುನಿಯಾ ವಿಜಯ್
Team Udayavani, Jun 4, 2024, 10:07 AM IST
ನಟ ದುನಿಯಾ ವಿಜಯ್ ಹಾಗೂ ನವನಟ ಶ್ರೇಯಸ್ ಮಂಜು ಹೊಸ ಚಿತ್ರವೊಂದರಲ್ಲಿ ಒಟ್ಟಿಗೆ ನಟಿಸುತ್ತಿದ್ದು, ಜೂನ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತಿದೆ. ಎಸ್. ನಾರಾ ಯಣ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.
ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಲಕ ನಿರ್ಮಾಣ ವಾಗುತ್ತಿರುವ ಮೊದಲ ಚಿತ್ರವಿದು.
ಸದ್ಯದಲ್ಲೇ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ. ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿ ಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನ ಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿ ಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.
ಎಸ್.ನಾರಾ ಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸು ತ್ತಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಹೆಚ್ ದಾಸ್ ಛಾಯಾ ಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.