![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 4, 2022, 11:28 AM IST
ಕನ್ನಡ ಚಿತ್ರರಂಗದ ಅನೇಕ ನಟರು ಆಗಾಗ್ಗೆ ತೆಲುಗು ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಟಾಲಿವುಡ್‌ನಲ್ಲೂ ಸೈ ಎನಿಸಿಕೊಂಡಿದ್ದಾರೆ. ಹಲವು ನಟರು ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುವಲ್ಲೂ ಯಶಸ್ವಿಯಾಗಿದ್ದಾರೆ. ಈಗ ಟಾಲಿವುಡ್‌ನಲ್ಲಿ ಅಕೌಂಟ್ ಒಪನ್ ಮಾಡುತ್ತಿರುವ ಸರದಿ ದುನಿಯಾ ವಿಜಯ್ ಅವರದ್ದು.
ಸದ್ಯ “ಸಲಗ’ ಚಿತ್ರದ ಸೂಪರ್ ಹಿಟ್ ಯಶಸ್ಸಿನಲ್ಲಿರುವ ದುನಿಯಾ ವಿಜಯ್ ಮುಂದೆ ಯಾವ ಸಿನಿಮಾ ಮಾಡುತ್ತಾರೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಸದ್ಯದ ಮಾಹಿತಿ ಪ್ರಕಾರ ದುನಿಯಾ ವಿಜಯ್ ಶೀಘ್ರದಲ್ಲಿಯೇ ತೆಲುಗು ಸಿನಿಮಾವೊಂದರಲ್ಲಿ ಬಣ್ಣ ಹಚ್ಚುವ ಮೂಲಕ ಟಾಲಿವುಡ್ ಅಂಗಳಕ್ಕೆ ಎಂಟ್ರಿಯಾಗುತ್ತಿದ್ದಾರೆ.
ಹೌದು, ನಟ ದುನಿಯಾ ವಿಜಯ್ ಅವರು ನಂದಮೂರಿ ಬಾಲಕೃಷ್ಣ ಜೊತೆ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿರುವುದು ಬಹುತೇಕ ಪಕ್ಕಾ ಆಗಿದೆ. ಈ ಹಿಂದೆ ಕೂಡ ತೆಲುಗು ಸ್ಟಾರ್ ನಟ ಬಾಲಕೃಷ್ಣ ಜೊತೆ ವಿಜಯ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಮತ್ತು ಒಂದಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ್ಗೆ ಹರಿದಾಡುತ್ತಿದ್ದರೂ, ಆದರೆ ಈ ಬಗ್ಗೆ ದುನಿಯಾ ವಿಜಯ್ ಅವರಾಗಲೀ, ಚಿತ್ರತಂಡವಾಗಲಿ ಎಲ್ಲೂ ಮಾಹಿತಿ ಬಿಟ್ಟುಕೊಂಡಿರಲಿಲ್ಲ. ಇದೀಗ ಚಿತ್ರತಂಡವೇ ಅಧಿಕೃತವಾಗಿ ದುನಿಯಾ ವಿಜಯ್ ತೆಲುಗು ಸಿನಿಮಾದಲ್ಲಿ ಅಭಿನಯಿಸುತ್ತಿರುವ ವಿಷಯವನ್ನು ಹಂಚಿಕೊಂಡಿದೆ.
ಇದನ್ನೂ ಓದಿ:ಜೋಹಾನ್ಸ್ ಬರ್ಗ್ ಟೆಸ್ಟ್: ರಬಾಡಾ, ಅಂಪೈರ್ ಗೆ ಕ್ಷಮೆ ಕೇಳಿದ ಕೆ.ಎಲ್.ರಾಹುಲ್
ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ “ಮೈತ್ರಿ ಮೂವೀ ಮೇಕರ್’ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ದುನಿಯಾ ವಿಜಯ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಸುದ್ದಿಯನ್ನು ಖಚಿತಪಡಿಸಿದೆ.
ಇನ್ನು ನೈಜ ಘಟನೆಗಳನ್ನು ಆಧರಿಸಿ ಮಾಡಲಾಗುತ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ಗೋಪಿಚಂದ್ ಮಲಿನೇನಿ ಆ್ಯಕ್ಷನ್-ಕಟ್ ಹೇಳಲಿದ್ದಾರೆ. ಈಗಾಗಲೇ ನಿರ್ದೇಶಕರು, ಪೋಸ್ಟರ್ ಬಿಡುಗಡೆ ಮಾಡಿ ವಿಜಿಯನ್ನು ಸ್ವಾಗತಿಸಿದ್ದಾರೆ.
Thank so much❤️ https://t.co/jd1QYXKT0y
— Duniya Vijay (@OfficialViji) January 3, 2022
ಅಂದಹಾಗೆ, ಈ ಸಿನಿಮಾ ತೆಲುಗು ನಟ ಬಾಲಕೃಷ್ಣ ಅಭಿನಯದ 107ನೇ ಸಿನಿಮಾವಾಗಿದ್ದು, ಸದ್ಯಕ್ಕೆ ಈ ಸಿನಿಮಾದ ಟೈಟಲ್ ಇನ್ನೂ ಅಂತಿಮವಾಗಿಲ್ಲ. ಈ ಸಿನಿಮಾಕ್ಕಾಗಿ ದುನಿಯಾ ವಿಜಯ್ ಈಗಾಗಲೇ ತಮ್ಮ ಹೇರ್ ಸ್ಟೈಲ್ ಮತ್ತು ಲುಕ್ ಬದಲಾಯಿಸಿಕೊಂಡಿದ್ದಾರೆ. ಆದರೆ ಸದ್ಯಕ್ಕೆ ದುನಿಯಾ ವಿಜಯ್ ಬಾಲಕೃಷ್ಣ ಅವರ ಸಿನಿಮಾದಲ್ಲಿ ಯಾವ ಪಾತ್ರ ಮಾಡಲಿದ್ದಾರೆ ಎಂಬ ಗುಟ್ಟನ್ನು ಮಾತ್ರ ಸದ್ಯಕ್ಕೆ ಚಿತ್ರತಂಡವಾಗಲಿ, ದುನಿಯಾ ವಿಜಯ್ ಅವರಾಗಲಿ ಇನ್ನೂ ಬಿಟ್ಟುಕೊಟ್ಟಿಲ್ಲ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.