ದಸರಾ ಹಬ್ಬಕ್ಕೆ ದುನಿಯಾ ವಿಜಯ್ ಅಭಿಮಾನಿಗಳಿಗೆ ಭರ್ಜರಿ ರಸದೌತಣ
Team Udayavani, Sep 26, 2021, 3:13 PM IST
ಬೆಂಗಳೂರು: ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ ನಟಿಸಿರುವ ಸಲಗ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಣೆಯಾಗಿದೆ. ಅಕ್ಟೋಬರ್ 14 ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ.
ಈ ಹಿಂದೆ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಅಗಸ್ಟ್ 20 ರಂದು ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ, ಕೋವಿಡ್ ಸೋಂಕಿನ ಮೂರನೇ ಅಲೆಯ ಭಯ ಹಾಗೂ ಚಿತ್ರಮಂದಿರಗಳಲ್ಲಿ 100 % ಸೀಟು ಭರ್ತಿಗೆ ಅವಕಾಶ ಇಲ್ಲದಿದ್ದರಿಂದ ಬಿಡುಗಡೆಯ ದಿನಾಂಕವನ್ನು ಹಿಂದಕ್ಕೆ ಪಡೆದುಕೊಂಡಿತ್ತು. ಇದೀಗ ಚಿತ್ರಮಂದಿರಗಳ ಹೌಸ್ ಫುಲ್ ಪ್ರದರ್ಶನಕ್ಕೆ ಸರ್ಕಾರದಿಂದ ಅನುಮತಿ ದೊರೆತಿದ್ದು, ಅಕ್ಟೋಬರ್ 14 ರಂದು ದಸರಾ ಹಬ್ಬದ ನಿಮಿತ್ತ ಸಿನಿಮಾ ಬಿಡುಗಡೆಯಾಗುತ್ತಿದೆ.
ಇನ್ನು ಇಷ್ಟು ದಿನಗಳ ಕಾಲ ತೆರೆ ಮೇಲೆ ನಾಯಕನಾಗಿ ಮಿಂಚುತ್ತಿದ್ದ ವಿಜಯ್ ‘ಸಲಗ’ ಚಿತ್ರದ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರದ ಸಂಜಯ್ ಆನಂದ್ ನಾಯಕಿಯಾಗಿದ್ದಾರೆ. ಅಚ್ಯುತ ಕುಮಾರ್, ರಂಘಾಯಣ ರಘು ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ.
ಕೋವಿಡ್ ಎರಡನೇ ಅಲೆ ಲಾಕ್‌ಡೌನ್‌ಗೂ ಮುನ್ನವೇ ಸಲಗ ಚಿತ್ರದ ಪ್ರಮೋಷನ್ ಸಾಂಗ್ ಚಿತ್ರೀಕರಣ ಮಾಡಲಾಗಿತ್ತು. ದುಬಾರಿ ಸೆಟ್ ಹಾಕುವ ಮೂಲಕ ಅಭಿಮಾನಿಗಳ ಗಮನ ಸೆಳೆದಿತ್ತು. ಈ ಚಿತ್ರದ ಟಿಣಿಂಗ ಮಿಣಿಂಗ ಸಾಂಗ್ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದು, ವಿಶೇಷವಾಗಿ ಮೂಡಿ ಬಂದಿರುವ ಇದು ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.