ದ್ವಾರಕೀಶ್‌ಗೆ ಬರ್ತ್‌ಡೇ ಸಂಭ್ರಮ


Team Udayavani, Aug 20, 2017, 10:08 AM IST

Dwarkish-(6).jpg

ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಅವರಿಗೆ ಶನಿವಾರ 75ನೇ ಹುಟ್ಟುಹಬ್ಬದ ಸಂಭ್ರಮ. ದ್ವಾರಕೀಶ್‌ ಅವರ 75ನೇ ಹುಟ್ಟುಹಬ್ಬವನ್ನು ಅವರ ಕುಟುಂಬ ಅದ್ಧೂರಿಯಾಗಿ ಆಚರಿಸಿದೆ. ಕನ್ನಡ ಚಿತ್ರರಂಗ ಸೇರಿದಂತೆ ಅವರ ಆಪ್ತ ವರ್ಗ ದ್ವಾರಕೀಶ್‌ ಅವರಿಗೆ ಶುಭಕೋರುವ ಮೂಲಕ ಶನಿವಾರವಿಡೀ ದ್ವಾರಕೀಶ್‌ ಚಟುವಟಿಕೆಯಿಂದ ಕೂಡಿದ್ದರು. ದ್ವಾರಕೀಶ್‌ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಬ್ಯಾನರ್‌ನ 51ನೇ ಸಿನಿಮಾವನ್ನು ಅನೌನ್ಸ್‌ ಮಾಡಲಾಯಿತು. 

ದ್ವಾರಕೀಶ್‌ ಬ್ಯಾನರ್‌ನ 51ನೇ ಸಿನಿಮಾವಾಗಿ ತಮಿಳಿನ “ಪಿಚೆòಕಾರನ್‌’ ಚಿತ್ರವನ್ನು ರೀಮೇಕ್‌ ಮಾಡುತ್ತಿದ್ದು, ಈ ಚಿತ್ರದಲ್ಲಿ “ರೋಗ್‌’ ಚಿತ್ರದ ಮೂಲಕ ನಾಯಕರಾಗಿ ಎಂಟ್ರಿಕೊಟ್ಟ ಇಶಾನ್‌ ನಾಯಕರಾಗಿ ನಟಿಸುತ್ತಿದ್ದಾರೆ. “ಆ ದಿನಗಳು’ ಚೈತನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯ ಚಿತ್ರಕ್ಕೆ “ಅಮ್ಮ ಐ ಲವ್‌ ಯೂ’ ಎಂದು ಟೈಟಲ್‌ ಇಡಲಾಗಿದ್ದು, ಇದು ವರ್ಕಿಂಗ್‌ ಟೈಟಲ್‌ ಎನ್ನುವುದು ನಿರ್ಮಾಪಕ ಯೋಗೇಶ್‌ ದ್ವಾರಕೀಶ್‌ ಮಾತು. 

ಚಿತ್ರ ಅಕ್ಟೋಬರ್‌ 3ರಿಂದ ಆರಂಭವಾಗಲಿದ್ದು, ಚಿತ್ರ ಬಿಡುಗಡೆಯ ದಿನಾಂಕವನ್ನೂ ನಿಗದಿ ಮಾಡಲಾಗಿದೆ. ಜನವರಿ 19ಕ್ಕೆ ಚಿತ್ರ ಬಿಡುಗಡೆ ಮಾಡುವ ಆಲೋಚನೆ ಕೂಡಾ ಚಿತ್ರತಂಡಕ್ಕಿದೆ. “ಒಂದು ಸಿನಿಮಾಕ್ಕೆ ನಾಲ್ಕು ತಿಂಗಳು ಸಮಯ ಸಾಕಾಗುತ್ತದೆ. ಅದಕ್ಕಿಂತ ಹೆಚ್ಚು ದಿನ ಸಿನಿಮಾ ಮಾಡಬಾರದು. ಆ ನಾಲ್ಕು ತಿಂಗಳಲ್ಲಿ ಸಿನಿಮಾ ಮಾಡಿ ಬಿಡುಗಡೆ ಮಾಡಬೇಕೆಂದು ಅಪ್ಪ ಹೇಳುತ್ತಿದ್ದರು. ಅದರಂತೆ ಈಗ ನಾಲ್ಕು ತಿಂಗಳಲ್ಲಿ ಈ ಸಿನಿಮಾ ಮಾಡಿ ಬಿಡುಗಡೆ ಮಾಡುವ ಆಲೋಚನೆ ಇದೆ.

ಒಂದು ವೇಳೆ ರಜನಿಕಾಂತ್‌ ಅವರ “2.0′ ಬಂದರೆ ನಮ್ಮ ಚಿತ್ರದ ಬಿಡುಗಡೆ ಮುಂದೆ ಹೋಗಬಹುದು’ ಎನ್ನುವುದು ಯೋಗೇಶ್‌ ಮಾತು. ಚಿತ್ರೀಕರಣಕ್ಕೆ ಹೋಗುವ ಮುನ್ನ ಸುಮಾರು 20 ದಿನಗಳ ಕಾಲ ರಿಹರ್ಸಲ್‌ ಮಾಡುವ ಉದ್ದೇಶ ಕೂಡಾ ಚಿತ್ರತಂಡಕ್ಕಿದೆ. ನಾಯಕಿ, ತಾಯಿ ಪಾತ್ರ ಸೇರಿದಂತೆ ಉಳಿದ ಕಲಾವಿದರು ಮತ್ತು ತಾಂತ್ರಿಕ ವರ್ಗದ ಆಯ್ಕೆ ಇನ್ನಷ್ಟೇ ಆಗಬೇಕಿದೆ. 

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.