ಈ ಪಟ್ಟಣಕ್ಕೆ ಏನಾಗಿದೆ? ತೆರೆಗೆ ಸಿದ್ದ
Team Udayavani, Jul 25, 2023, 6:35 PM IST
ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹೀರಾತಿನಲ್ಲಿ ಕೇಳುವ ಪದವೇ “ಈ ಪಟ್ಟಣಕ್ಕೆ ಏನಾಗಿದೆ? ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದ್ದು, ಬಿಡುಗಡೆಗೂ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಟೀಸರ್ ಮೂಲಕ ಚಿತ್ರದ ಕುರಿತು ಐದು ಗ್ಯಾರೆಂಟಿಗಳನ್ನು ಪ್ರೇಕ್ಷಕರಿಗೆ ನೀಡುವುದಾಗಿ ನಿರ್ದೇಶಕ ರವಿ ಸುಬ್ಬರಾವ್ ತಿಳಿಸಿದ್ದಾರೆ.
ಜೂಜು ಮತ್ತು ಬೆಟ್ಟಿಂಗ್ ಮಾಫಿಯಾದ ಸುತ್ತ ಹೆಣೆಯಲಾಗಿರುವ ಈ ಚಿತ್ರದಲ್ಲಿ ನಾಯಕ ತನ್ನ ವಿಲಾಸ ಜೀವನಕ್ಕಾಗಿ ಹೇಗೆ ಅನೇಕರನ್ನು ತನ್ನ ಮೋಸದ ಜಾಲಕ್ಕೆ ಬೀಳಿಸಿಕೊಂಡು ಉನ್ನತ ಸ್ಥಾನಕ್ಕೆ ಏರುತ್ತಾನೆ ಎನ್ನುವುದರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಕೂಡ ಕುತೂಹಲ ಭರಿತವಾಗಿ ತೋರಿಸಲಾಗಿದೆ ಯಂತೆ.
ಈ ಚಿತ್ರಕ್ಕೆ ರವಿ ಸುಬ್ಬ ರಾವ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿರುವುದಲ್ಲದೆ, ನಾಯಕನಾಗಿಯೂ ಅಭಿನಯಿಸಿದ್ದಾರೆ. ರಾಧಿಕಾರಾಮ್ ಈ ಚಿತ್ರದ ನಾಯಕಿ. ರಿತೇಶ್ ಜೋಶಿ, ಶ್ರೀನಿಧಿ, ಸತೀಶ್ ಶೆಟ್ಟಿ, ಸೋನಾ, ದಿಶಾ , ಸಂಧ್ಯಾ ವೇಣು, ಬಲರಾಮ್ , ಸುಕನ್ಯಾ, ಗೋಪಾಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ರಿತೇಶ್ ಜೋಶಿ ಮತ್ತು ರವಿ ಸುಬ್ಬ ರಾವ್ ನಿರ್ಮಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ ಸಂಗೀತ ನೀಡಿದ್ದಾರೆ. ಈ ಪಟ್ಟಣಕ್ಕೆ ಏನಾಗಿದೆ? ಚಿತ್ರ 2 ಭಾಗಗಳಲ್ಲಿ ಬರುತ್ತಿದ್ದು, ಮೊದಲನೇ ಭಾಗ ತೆರೆಗೆ ಬರಲು ಸಿದ್ಧವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.